ವಿರೋಧ ಪಕ್ಷದ ಟೀಕೆಗಳಿಗೆ ನಮ್ಮ ಕಾರ್ಯಕ್ರಮಗಳೇ ಉತ್ತರ: ಸಚಿವ ಮಧು ಬಂಗಾರಪ್ಪ

Prasthutha|

ಬಿಜೆಪಿ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

- Advertisement -

ಮಂಗಳೂರು: ವಿರೋಧ ಪಕ್ಷದ ಟೀಕೆಗಳಿಗೆ ನಮ್ಮ ಗ್ಯಾರೆಂಟಿ ಯೋಜನೆಗಳೇ ಉತ್ತರ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು.

ಇಂದು ಮಂಗಳೂರಿನ ಕಾಂಗ್ರೆಸ್ ‌ಕಚೇರಿಯಲ್ಲಿ‌ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

- Advertisement -

ಚುನಾವಣೆಯಲ್ಲಿ ಘೋಷಣೆ ಮಾಡಿದಂತೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿದ್ದೇವೆ. ವಿರೋಧ ಪಕ್ಷದವರು ತಮ್ಮ ಸೋಲು ಮುಚ್ಚಿಕೊಳ್ಳಲು ಗ್ಯಾರಂಟಿಗಳ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಪ್ರಣಾಳಿಕೆಯಲ್ಲಿ ಹೇಳಿದ ಅವಶ್ಯಕ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದ್ದಾರೆ. ಪ್ರಣಾಳಿಕೆ ರಚನಾ ಸಮಿತಿಯ ಉಪಾಧ್ಯಕ್ಷನಾಗಿದ್ದೆ. ಅದರ ಬಗ್ಗೆ ‌ನಮಗೆ‌ ಹೆಮ್ಮೆಯಿದೆ ಎಂದರು.

ಕಾಂಗ್ರೆಸ್ ನ ಕಾರ್ಯಕ್ರಮಗಳು ಸಾಮಾನ್ಯರಿಗೆ, ಬಡ ಜನರಿಗೆ ಸ್ಪಂದನೆ ಆಗಿವೆ. ಬಿಜೆಪಿ ಜೆಡಿಎಸ್ ಬೇರೆ ಬೇರೆ ಪಕ್ಷಗಳ ಕಾರ್ಯಕ್ರಮಗಳಿಗಿಂತಲೂ ನಮ್ಮ ಕಾರ್ಯಕ್ರಮಗಳು ಜನರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸ ಕಾಂಗ್ರೆಸ್ ಮಾಡಿದೆ. ನಮ್ಮ ತಂದೆ ಬಂಗಾರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ನೀಡಿದ ಯೋಜನೆಗಳ ಇಂದಿಗೂ ಜಾರಿಯಲ್ಲಿದೆ. ರೈತರಿಗೆ ಉಚಿತ‌ ವಿದ್ಯುತ್ ನೀಡಿದ್ದು ನಮ್ಮ ತಂದೆ. ಬಂಗಾರಪ್ಪ ಅವರ ಮಗ ನಾನು ಎನ್ನುವುದಕ್ಕೆ ನನ್ನನ್ನು ಗುರುತಿಸುತ್ತಾರೆ ಎಂದು ತಿಳಿಸಿದರು.

ವಿರೋಧ ಪಕ್ಷದವರಿಗೆ ನಾವು ಉತ್ತರ ಕೊಡುವುದು ಬೇಡ. ನಮ್ಮ ಕಾರ್ಯಕ್ರಮಗಳೇ ಅವರಿಗೆ ಉತ್ತರ. ಸಾಮಾನ್ಯ ಜನರ ಮನೆಗಳಲ್ಲಿ ನಮ್ಮ ಕಾರ್ಯಕ್ರಮಗಳು ಸಹಕಾರಿ ಆಗುತ್ತಿವೆ. ಮಹಿಳೆಯರನ್ನು ಸಬಲರನ್ನಾಗಿಸಲು ಶಕ್ತಿ, ಗೃಹಲಕ್ಷ್ಮಿ ಯೋಜನೆ ಜಾರಿಯಾಗಿವೆ. ಪ್ರಣಾಳಿಕೆಯಲ್ಲಿನ ಎಲ್ಲ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಜಾರಿಗೊಳಿಸುತ್ತೇವೆ ಎಂದರು.

ನಾವು ಪ್ರಣಾಳಿಕೆಯಲ್ಲಿ ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿದ್ದೇವು. ಅದರ‌ ಅವಶ್ಯಕತೆ ರಾಜ್ಯಕ್ಕೆ ಇದೆ ಎನ್ನುವ ಕಾರಣಕ್ಕೆ ಜನತೆ ಕಾಂಗ್ರೆಸ್ ಗೆ ಮತ ನೀಡಿದ್ದಾರೆ. ಸಂಪೂರ್ಣ ಬಹುಮತ ನೀಡಿದ್ದಾರೆ. ಬಿಜೆಪಿಯವರು ಶಾಂತಿಯಿಂದ ಇದ್ದ ಕರ್ನಾಟಕವನ್ನು ಕಲ್ಮಷ ಮಾಡಿದ್ದರು. ಅದಕ್ಕಾಗಿ ಜನರು ಬಿಜೆಪಿಯನ್ನು ಸೋಲಿಸಿದ್ದಾರೆ. ನಾವು ಐದು ವರ್ಷ ಒಳ್ಳೆಯ ಕಾರ್ಯಕ್ರಮ ಕೊಟ್ಟು ಶಾಂತಿಯುತವಾಗಿ ನಡೆಸಿಕೊಂಡು ಹೋಗುತ್ತೇವೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್, ಮಾಜಿ ಶಾಸಕರಾದ ಐವನ್ ಡಿಸೋಜ, ಜೆ ಅರ್ ಲೊಬೋ, ಶಾಹುಲ್ ಹಮೀದ್, ವಿಸ್ವಾಶ್ ಕುಮಾರ್ ದಾಸ್, ನೀರಜ್ ಚಂದ್ರ ಪಾಲ್ ಉಪಸ್ಥಿತರಿದ್ದರು.

Join Whatsapp