ನವದೆಹಲಿ: ಲೋಕಸಭೆ ಚುನಾವಣಾ ಫಲಿತಾಂಶದ ಬಗ್ಗೆ ಎಲ್ಲರೂ ಕಾದು ನೋಡಬೇಕಿದೆ. ನಮ್ಮ ಫಲಿತಾಂಶವು ಮತಗಟ್ಟೆ ಸಮೀಕ್ಷೆಗಳಿಗೆ ವಿರುದ್ಧವಾಗಿರಲಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.
ಚುನಾವಣಾ ಫಲಿತಾಂಶದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ‘ಲೋಕಸಭೆ ಚುನಾವಣಾ ಫಲಿತಾಂಶದ ಬಗ್ಗೆ ಎಲ್ಲರೂ ಕಾದು ನೋಡಬೇಕಿದೆ. ನಮ್ಮ ಫಲಿತಾಂಶವು ಮತಗಟ್ಟೆ ಸಮೀಕ್ಷೆಗಳಿಗೆ ವಿರುದ್ಧವಾಗಿರಲಿದೆ. ನಿಜವಾದ ಫಲಿತಾಂಶವನ್ನು ನೀವು ನಾಳೆ ನೋಡಲಿದ್ದೀರಿ’ ಎಂದು ಹೇಳಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆ 7 ಹಂತಗಳಲ್ಲಿ ನಡೆದಿತ್ತು. ನಾಳೆ (ಮಂಗಳವಾರ) ಫಲಿತಾಂಶ ಪ್ರಕಟವಾಗಲಿದೆ.
#WATCH | Delhi: "We just have to wait and see," says Congress Parliamentary Party Chairperson Sonia Gandhi on her expectations for the day of counting tomorrow, 4th June.#LokSabhaElections2024 pic.twitter.com/3HBS1ytHyB
— ANI (@ANI) June 3, 2024