Home ಟಾಪ್ ಸುದ್ದಿಗಳು ನಮ್ಮ ಫಲಿತಾಂಶ ಮತಗಟ್ಟೆ ಸಮೀಕ್ಷೆಗೆ ವಿರುದ್ಧವಾಗಿರಲಿದೆ: ಸೋನಿಯಾ ಗಾಂಧಿ

ನಮ್ಮ ಫಲಿತಾಂಶ ಮತಗಟ್ಟೆ ಸಮೀಕ್ಷೆಗೆ ವಿರುದ್ಧವಾಗಿರಲಿದೆ: ಸೋನಿಯಾ ಗಾಂಧಿ

ನವದೆಹಲಿ: ಲೋಕಸಭೆ ಚುನಾವಣಾ ಫಲಿತಾಂಶದ ಬಗ್ಗೆ ಎಲ್ಲರೂ ಕಾದು ನೋಡಬೇಕಿದೆ. ನಮ್ಮ ಫಲಿತಾಂಶವು ಮತಗಟ್ಟೆ ಸಮೀಕ್ಷೆಗಳಿಗೆ ವಿರುದ್ಧವಾಗಿರಲಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.


ಚುನಾವಣಾ ಫಲಿತಾಂಶದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ‘ಲೋಕಸಭೆ ಚುನಾವಣಾ ಫಲಿತಾಂಶದ ಬಗ್ಗೆ ಎಲ್ಲರೂ ಕಾದು ನೋಡಬೇಕಿದೆ. ನಮ್ಮ ಫಲಿತಾಂಶವು ಮತಗಟ್ಟೆ ಸಮೀಕ್ಷೆಗಳಿಗೆ ವಿರುದ್ಧವಾಗಿರಲಿದೆ. ನಿಜವಾದ ಫಲಿತಾಂಶವನ್ನು ನೀವು ನಾಳೆ ನೋಡಲಿದ್ದೀರಿ’ ಎಂದು ಹೇಳಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆ 7 ಹಂತಗಳಲ್ಲಿ ನಡೆದಿತ್ತು. ನಾಳೆ (ಮಂಗಳವಾರ) ಫಲಿತಾಂಶ ಪ್ರಕಟವಾಗಲಿದೆ.

Join Whatsapp
Exit mobile version