Home ಟಾಪ್ ಸುದ್ದಿಗಳು ಕೇಂದ್ರ ಸರ್ಕಾರದ ವಿರುದ್ಧ ನಮ್ಮ ತೆರಿಗೆ ನಮ್ಮ ಹಕ್ಕು ಪ್ರತಿಭಟನೆ: ಡಿಕೆ ಶಿವಕುಮಾರ್

ಕೇಂದ್ರ ಸರ್ಕಾರದ ವಿರುದ್ಧ ನಮ್ಮ ತೆರಿಗೆ ನಮ್ಮ ಹಕ್ಕು ಪ್ರತಿಭಟನೆ: ಡಿಕೆ ಶಿವಕುಮಾರ್

ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ನಮ್ಮ ರಾಜ್ಯಕ್ಕೆ ತಾರತಮ್ಯವಾಗಿದೆ. ತೆರಿಗೆ ತಾರತಮ್ಯ ಖಂಡಿಸಿ “ನಮ್ಮ ತೆರಿಗೆ ನಮ್ಮ ಹಕ್ಕು” ಎಂದು ಪ್ರತಿಭಟನೆ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.


ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅತಿಹೆಚ್ಚು ತೆರಿಗೆ ಪಾವತಿಸುವ ನಮಗೆ ತಾರತಮ್ಯವಾಗುತ್ತಿದೆ. ನಮ್ಮ ತೆರಿಗೆ ಹಣ ಉತ್ತರ ಪ್ರದೇಶ, ದೆಹಲಿ, ಬಿಹಾರಕ್ಕೆ ಕೊಡುತ್ತಿದ್ದಾರೆ. ಆಂಧ್ರಕ್ಕಿಂತಲೂ ಕಡಿಮೆ ಹಣ ನಮಗೆ ನೀಡಿದ್ದಾರೆ. ಅವರಿಗಿಂತ ಕೀಳಾಗಿದ್ದೇವಾ? ಎಂದು ಪ್ರಶ್ನಿಸಿದರು.


ನಿರ್ಮಲಾ ಸೀತಾರಾಮನ್ ಸೇರಿದಂತೆ ಕೇಂದ್ರ ಸರ್ಕಾರದಲ್ಲಿ ಐವರು ಸಚಿವರು ನಮ್ಮವರೇ ಇದ್ದಾರೆ. ನಮ್ಮಲ್ಲೇ ಇದ್ದುಕೊಂಡು ಈಗ ನಮಗೆ ಅನ್ಯಾಯ ಮಾಡುತ್ತಿದ್ದಾರೆ. ಇದರ ವಿರುದ್ಧ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.


ರಾಜ್ಯ ಸರ್ಕಾರದ ಜಾಹೀರಾತಿಗೆ ವಿಪಕ್ಷಗಳು ಆಕ್ಷೇಪ ಎತ್ತಿರುವ ವಿಚಾರವಾಗಿ ಮಾತನಾಡಿದ ಅವರು, ನಮಗಿರುವ ಮಾಹಿತಿಯನ್ನು ಜಾಹಿರಾತು ರೂಪದಲ್ಲಿ ನೀಡಿದ್ದೇವೆ. ನಾವು ಮುನ್ನಡೆಯುತ್ತಿರುವ ದಾರಿಯ ಆಧಾರದ ಮೇಲೆ ಮತ್ತು ನಮ್ಮ ಭಾವನೆಗಳ ಮೇಲೆ ಜಾಹೀರಾತು ನೀಡಿದ್ದೇವೆ. ನಮ್ಮ ಸರ್ಕಾರದ ಸಾಧನೆ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಮಾತನಾಡುತ್ತೇವೆ ಎಂದರು.

Join Whatsapp
Exit mobile version