Home ಟಾಪ್ ಸುದ್ದಿಗಳು ನಮ್ಮ ಗಾಡಿ ಫುಲ್ ಇದೆ, ಜೆಡಿಎಸ್ ಶಾಸಕರನ್ನು ತಗೊಂಡು ಏನು ಮಾಡೋಣ: ಸತೀಶ್ ಜಾರಕಿಹೊಳಿ

ನಮ್ಮ ಗಾಡಿ ಫುಲ್ ಇದೆ, ಜೆಡಿಎಸ್ ಶಾಸಕರನ್ನು ತಗೊಂಡು ಏನು ಮಾಡೋಣ: ಸತೀಶ್ ಜಾರಕಿಹೊಳಿ

0

ಬೆಂಗಳೂರು: ‘ನಮ್ಮದೇ ಗಾಡಿ ಫುಲ್ ಇದೆ. ಜೆಡಿಎಸ್ 18 ಶಾಸಕರನ್ನು ತೆಗೆದುಕೊಂಡು ನಾವೇನು ಮಾಡೋಣ’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಓವರ್ ಲೋಡೆಡ್ ಇದ್ದರೂ ನಮ್ಮದು ಕಾಂಗ್ರೆಸ್ ಪಕ್ಷವೇ. ಇಲ್ಲಿಯೇ ಅಧ್ಯಕ್ಷ ಆಗಬೇಕು. ಇಲ್ಲಿಯೇ ಸಿಎಂ ಆಗಬೇಕು. ಸದ್ಯಕ್ಕೆ ವೇಯ್ಟಿಂಗ್ ಲಿಸ್ಟ್‌ನಲ್ಲಿ ಇದ್ದೇವೆ ಇಲ್ಲಿಯೇ ಕಾಯ್ತೇವೆ’ ಎಂದರು.

‘ನಾನು ಆರ್‌ಎಸಿ ಟಿಕೆಟ್‌ನಲ್ಲಿದ್ದೇನೆ. ಇಲ್ಲಿಯೇ ಕಾಂಗ್ರೆಸ್ ಪಕ್ಷದಲ್ಲಿಯೇ ಕಾಯ್ತೇನೆ. ಯಾರಾದ್ರೂ ಮೆಜೆಸ್ಟಿಕ್ ಜಾಮ್‌ನಲ್ಲಿ ಸಿಕ್ಕಿಹಾಕಿಕೊಂಡು ಬರುವುದು ತಡವಾದರೆ ನಮಗೆ ಅವಕಾಶ ಸಿಗಬಹುದು’ ಎಂದರು.

‘ಎಲ್ಲರೂ ಆರ್‌ಎಸಿ ಟಿಕೆಟ್ ಇಟ್ಟುಕೊಂಡೇ ಕಾಯ್ತಿದ್ದಾರೆ. ಇಲ್ಲಿ ಶಿಂಧೆ, ಅಜಿತ್ ಪವರ್ ಯಾರೂ ಇಲ್ಲ. ಆ ಸಾಮರ್ಥ್ಯ ಇಲ್ಲಿ ಯಾರಿಗೂ ಇಲ್ಲ’ ಎಂದರು .

‘ಸಚಿವ ಕೆ. ಎನ್. ರಾಜಣ್ಣ ಹನಿಟ್ರ್ಯಾಪ್ ಕೇಸ್ ಬೇರೆ. ರಾಜೇಂದ್ರ ಕೇಸ್ ಬೇರೆ. ಎರಡೂ ಒಂದಕ್ಕೊಂದು ಸಂಬಂಧ ಇಲ್ಲ. ರಾಜೇಂದ್ರ ಕೇಸ್ ಸ್ವಲ್ಪ ಹಳೆಯದು, ಎರಡು ತಿಂಗಳು ಮೊದಲಿನದು. ಅವರಿಗೆ ಯಾರೋ ಕರೆ ಮಾಡಿ ಬೆದರಿಕೆ ಹಾಕ್ತಿದ್ರು ಅನ್ನೋದು. ಹನಿ ಟ್ರ್ಯಾಪ್‌ಗೂ ಇದಕ್ಕೂ ಸಂಬಂಧ ಇಲ್ಲ’ ಎಂದರು.

NO COMMENTS

LEAVE A REPLY

Please enter your comment!
Please enter your name here

Exit mobile version