ನಮ್ಮದು ಆಪರೇಷನ್ ಅಲ್ಲ; ಕೋ ಅಪರೇಷನ್ ಸ್ನೇಹದ ಹಸ್ತ: ಡಿಕೆಶಿ

Prasthutha|

ಬೆಂಗಳೂರು: ನಾವು ಆಪರೇಷನ್ ಹಸ್ತ, ಆಪರೇಷನ್ ಕಮಲ ಎರಡರ ವಿರೋಧಿ. ಯಾವುದೇ ಕಾರಣಕ್ಕೂ ಈ ಕೆಲಸಕ್ಕೆ ಮುಂದಾಗುವುದಿಲ್ಲ. ನಮ್ಮದೇನಿದ್ದರೂ ಕೋ-ಆಪರೇಷನ್ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

- Advertisement -

ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು ಸುಕುಮಾರ್ ಶೆಟ್ಟಿ ಆಗಲಿ ಯಾರೇ ಆಗಲಿ ನಾವು ಸ್ನೇಹದ ಹಸ್ತ ಚಾಚುತ್ತೇವೆ. ನಮ್ಮ ಪಕ್ಷದ ತತ್ವ ಸಿದ್ದಾಂತ, ಭಾರತ್ ಜೋಡೋ ಬಗ್ಗೆ ಯಾರಿಗೆ ಒಲವಿದೆ ಅವರನ್ನು ತಬ್ಬಿಕೊಳ್ಳುತ್ತೇವೆ. ಅವರ ಹೆಗಲ ಮೇಲೆ ಕೈಹಾಕಿಕೊಂಡು ಹೆಜ್ಜೆ ಹಾಕುತ್ತೇವೆ. ಹಾಲಿ- ಮಾಜಿಗಳನ್ನು ಯಾರಾದರೂ ತಬ್ಬಿಕೊಳ್ಳುತ್ತೇವೆ ಎಷ್ಟು ಜನ ಸೇರಲಿದ್ದಾರೆ ಎನ್ನುವ ಪಟ್ಟಿ ಹೇಳಲು ಆಗಲ್ಲ. ಅವರವರೇ ಹೇಳಿರುವಂತೆ ಒಳ್ಳೆಯ ಮುಹೂರ್ತ, ಲಗ್ನ ಕೂಡಿ ಬಂದಾಗ ನಡೆಯಲಿದೆ.

ರಾಜಕೀಯದಲ್ಲಿ ಯಾರೂ ಮಿತ್ರರಲ್ಲ, ಶತ್ರುಗಳಲ್ಲ. ರಾಜಕೀಯ ಎನ್ನುವುದು ಸಾಧ್ಯತೆಗಳ ಕಲೆ. ನಾವು ಯಾರನ್ನೂ ಕರೆಯುವುದಿಲ್ಲ. ರಾಜಕೀಯದಲ್ಲಿ ಯಾರೂ ದಡ್ಡರಲ್ಲ. ಎಲ್ಲರೂ ಅವರವರ ಭವಿಷ್ಯ ನೋಡಿಕೊಳ್ಳಬೇಕು ಎಂದಿದ್ದಾರೆ.

Join Whatsapp