ಶಾಲಾ ಬಸ್-ಪೆಟ್ರೋಲ್ ಟ್ಯಾಂಕರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

Prasthutha|

ಕಾರವಾರ: ಶಾಲಾ ಬಸ್ ಹಾಗೂ ಪೆಟ್ರೋಲ್ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಯಲ್ಲಾಪುರ ತಾಲ್ಲೂಕಿನ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಶುಕ್ರವಾರ ನಡೆದಿದೆ.

- Advertisement -

ಗಾಯಾಳುಗಳಿಗೆ ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


ಹುಬ್ಬಳ್ಳಿಯ ಸೇಂಟ್ ಆಂಟನಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳನ್ನು ಉತ್ತರ ಕನ್ನಡದ ಕರಾವಳಿ ಭಾಗಕ್ಕೆ ಪ್ರವಾಸಕ್ಕೆ ಕರೆದುಕೊಂಡು ಬರುತ್ತಿದ್ದಾಗ ಅಪಘಾತವಾಗಿದೆ. ಯಲ್ಲಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp