Home ಟಾಪ್ ಸುದ್ದಿಗಳು ಶಾಲಾ ಬಸ್-ಪೆಟ್ರೋಲ್ ಟ್ಯಾಂಕರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಶಾಲಾ ಬಸ್-ಪೆಟ್ರೋಲ್ ಟ್ಯಾಂಕರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಕಾರವಾರ: ಶಾಲಾ ಬಸ್ ಹಾಗೂ ಪೆಟ್ರೋಲ್ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಯಲ್ಲಾಪುರ ತಾಲ್ಲೂಕಿನ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಶುಕ್ರವಾರ ನಡೆದಿದೆ.

ಗಾಯಾಳುಗಳಿಗೆ ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


ಹುಬ್ಬಳ್ಳಿಯ ಸೇಂಟ್ ಆಂಟನಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳನ್ನು ಉತ್ತರ ಕನ್ನಡದ ಕರಾವಳಿ ಭಾಗಕ್ಕೆ ಪ್ರವಾಸಕ್ಕೆ ಕರೆದುಕೊಂಡು ಬರುತ್ತಿದ್ದಾಗ ಅಪಘಾತವಾಗಿದೆ. ಯಲ್ಲಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version