ಇಂದಿನಿಂದ ಬೆಂಗಳೂರಿನಲ್ಲಿ ಕಂಬಳ ಕಲರವ: 200ಕ್ಕೂ ಹೆಚ್ಚು ಕೋಣಗಳು ಕಣಕ್ಕೆ

Prasthutha|

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳದ ಕಲರವಕ್ಕೆ ಕ್ಷಣಗಣನೆ ಶುರುವಾಗಿದೆ.

- Advertisement -

ಇಂದಿನಿಂದ ಮೂರು ದಿನಗಳ ಕಾಲ ಕಂಬಳ ನಡೆಯಲಿದೆ.

ಬೆಳಗ್ಗೆ 10 ಗಂಟೆಗೆ ವೇದಿಕೆ ಕಾರ್ಯಕ್ರಮ ಉದ್ಘಾಟನೆ ಆಗಿದ್ದು, ನಾಳೆ ಸಂಜೆ 3:30 ಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಕಂಬಳ ಉದ್ಘಾಟನೆ ಮಾಡಲಿದ್ದಾರೆ.

- Advertisement -

ಕಂಬಳದಲ್ಲಿ ಗೆದ್ದ ಜೋಡಿಗೆ ಮೊದಲ ಬಹುಮಾನವಾಗಿ 16 ಗ್ರಾಂ ಚಿನ್ನದ ಪದಕ ಹಾಗೂ ಒಂದು ಲಕ್ಷ ನಗದು ನೀಡಲಾಗುತ್ತದೆ. ಎರಡನೇ ಸ್ಥಾನಕ್ಕೆ 8 ಗ್ರಾಂ ಚಿನ್ನದ ಪದಕ ಹಾಗೂ 50 ಸಾವಿರ ನಗದು, ಮೂರನೇ ಸ್ಥಾನಕ್ಕೆ 4 ಗ್ರಾಂ ಚಿನ್ನ ಮತ್ತು 25 ಸಾವಿರ ಹಣ ನೀಡಲಾಗುತ್ತಿದೆ ಎಂದು ಗುರುಕಿರಣ್ ಮಾಹಿತಿ ನೀಡಿದರು.

ಎರಡು ದಿನದ ಕಂಬಳಕ್ಕೆ ಅಂದಾಜು 6 ರಿಂದ 7 ಲಕ್ಷದಷ್ಟು ಜನರು ಬರುವ ಸಾಧ್ಯತೆ ಇದ್ದು, ಜನರು ಕಂಬಳ ವೀಕ್ಷಿಸಲು ದೊಡ್ಡ ಸ್ಟೇಜ್​​ಗಳನ್ನು ನಿರ್ಮಾಣ ಮಾಡಲಾಗಿದೆ

Join Whatsapp