Home ಟಾಪ್ ಸುದ್ದಿಗಳು ಮೊರಾಕ್ಕೋ| 2,000 ದಾಟಿದ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ

ಮೊರಾಕ್ಕೋ| 2,000 ದಾಟಿದ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ

6 ದಶಕಗಳಲ್ಲೇ ಭೀಕರ ದುರಂತ

ರಬಾತ್:‌ ಶುಕ್ರವಾರ ತಡರಾತ್ರಿ ಮಧ್ಯ ಮೊರಾಕ್ಕೋದಲ್ಲಿ ಸಂಭವಿಸಿದ 7.2 ತೀವ್ರತೆಯ ಪ್ರಬಲ ಭೂಕಂಪಕ್ಕೆ 2,000 ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ ಮತ್ತು ಸಾವಿರಾರು ಜನರು ಗಾಯಗೊಂಡಿದ್ದಾರೆ.

ಗಾಯಗೊಂಡ ಸಾವಿರಾರು ಜನರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ, ನಗರಗಳು ಮತ್ತು ಪಟ್ಟಣಗಳ ಹೊರಗೆ ಹೆಚ್ಚಿನ ಹಾನಿ ಸಂಭವಿಸಿದೆ ಎಂದು ಮೊರಾಕ್ಕೋದ ಆಂತರಿಕ ಸಚಿವಾಲಯವು ಹೇಳಿದೆ. ಆದರೆ, ಅಧಿಕಾರಿಗಳು ಇನ್ನೂ ಹಾನಿಯ ಪ್ರಮಾಣವನ್ನು ಲೆಕ್ಕಾಚಾರ ಮಾಡಬೇಕಾಗಿದೆ.

ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ”ಭೂಕಂಪದಿಂದಾಗಿ ಜೀವಹಾನಿಯಿಂದ ತೀವ್ರ ನೋವಾಗಿದೆ. ಈ ದುರಂತ ಸಮಯದಲ್ಲಿ, ನನ್ನ ಆಲೋಚನೆಗಳು ಮೊರಾಕ್ಕೋ ಜನರೊಂದಿಗೆ ಇವೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಈ ಕಷ್ಟದ ಸಮಯದಲ್ಲಿ ಮೊರಾಕ್ಕೋಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಭಾರತ ಸಿದ್ಧವಾಗಿದೆ.” ಎಂದು ಬರೆದಿದ್ದಾರೆ.

Join Whatsapp
Exit mobile version