Home ಟಾಪ್ ಸುದ್ದಿಗಳು ಶಾಲಾ ಬಸ್ ಪಲ್ಟಿ: 25ಕ್ಕೂ ಅಧಿಕ ಮಕ್ಕಳಿಗೆ ಗಾಯ

ಶಾಲಾ ಬಸ್ ಪಲ್ಟಿ: 25ಕ್ಕೂ ಅಧಿಕ ಮಕ್ಕಳಿಗೆ ಗಾಯ

ಹೈಲಕಂಡಿ: ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್ ಪಲ್ಟಿಯಾಗಿ, 25ಕ್ಕೂ ಅಧಿಕ ಮಕ್ಕಳು ಗಾಯಗೊಂಡಿರುವ ಘಟನೆ ಅಸ್ಸಾಂನ ಹೈಲಕಂಡಿ ಜಿಲ್ಲೆಯಲ್ಲಿ ನಡೆದಿದೆ.


ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಪಿಕ್ ನಿಕ್ ಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಅಪಘಾತದಲ್ಲಿ ಗಾಯಗೊಂಡ ಒಟ್ಟು ನಾಲ್ವರನ್ನು ಸಿಲ್ಚಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಶಿಫಾರಸು ಮಾಡಲಾಗಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಮೀರ್ ಬರುವಾ, ಗಾಯಾಳುಗಳಿಗೆ ವೈದ್ಯಕೀಯ ನೆರವು ನೀಡಲು ಮೊದಲ ಆದ್ಯತೆ ನೀಡಲಾಗಿದ್ದು, ಅಪಘಾತದ ಹಿಂದಿನ ಕಾರಣವನ್ನು ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದರು.

Join Whatsapp
Exit mobile version