ಬೈಕ್​ಗೆ ಡಿಕ್ಕಿಯಾಗಿ ಹೊಲಕ್ಕೆ ನುಗ್ಗಿದ ಕೆಎಸ್​ಆರ್​ಟಿಸಿ, 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Prasthutha|

ರಾಯಚೂರು: ಬೈಕ್​ಗೆ ಡಿಕ್ಕಿಯಾದ ಕೆಎಸ್​ಆರ್​ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೊಲಕ್ಕೆ ನುಗ್ಗಿದ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ನಂದಿಹಾಳ ಗ್ರಾಮದ ಬಳಿ ನಡೆದಿದೆ.

- Advertisement -

ಮಂತ್ರಾಲಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ನಂದಿಹಾಳದ ಬಳಿ ಬೈಕ್​ಗೆ ಡಿಕ್ಕಿಯಾಗಿ ರಸ್ತೆ ಪಕ್ಕದ ಹೊಲಕ್ಕೆ ನುಗ್ಗಿದೆ.

ಘಟನೆಯಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಹಾಗೂ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ