ಬಾಂಗ್ಲಾದೇಶದಲ್ಲಿ ಹಿಂಸಾಚಾರಕ್ಕೆ ತಿರುಗಿದ ಮೀಸಲಾತಿ ವಿರೋಧಿ ಪ್ರತಿಭಟನೆ: 40ಕ್ಕೂ ಹೆಚ್ಚು ಮಂದಿ ಸಾವು

Prasthutha|

ಢಾಕಾ : ಬಾಂಗ್ಲಾದೇಶದಲ್ಲಿ ನಾಗರಿಕ ಸೇವೆಗಳಿಗೆ ನೇಮಕಾತಿ ವಿಚಾರದಲ್ಲಿ ಸರ್ಕಾರ ಮೀಸಲಾತಿ ನಿರ್ಣಯವನ್ನು ಖಂಡಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಗಲಭೆಯಲ್ಲಿ ಇದುವರೆಗೂ 40 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು ನೂರಾರು ಮಂದಿ ಗಾಯಗೊಂಡಿದ್ದಾರೆ.

- Advertisement -

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಾಲು ರಾಜಧಾನಿ ಸೇರಿದಂತೆ ದೇಶದಾದ್ಯಂತ ಗಡಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.
ಕೆಲವು ದಿನಗಳಿಂದ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಹಿಂಸಾಚಾರ ತೀವ್ರಗೊಂಡ ಬೆನ್ನಲ್ಲೇ ಪ್ರತಿಭಟನಾನಿರತ ವಿದ್ಯಾರ್ಥಿಗಳ ಜತೆಗೆ ಮಾತುಕತೆಗೆ ಸಿದ್ಧ ಎಂದು ಬಾಂಗ್ಲಾದೇಶದ ಸರ್ಕಾರ ತಿಳಿಸಿದೆ.


ರಬ್ಬರ್ ಬುಲೆಟ್, ಅಶ್ರುವಾಯು: ಢಾಕಾ ವಿಶ್ವವಿದ್ಯಾಲಯದ ಆವರಣ ಸೇರಿದಂತೆ ವಿವಿಧೆಡೆ ಪ್ರತಿಭಟನಾನಿರತರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ರಬ್ಬರ್ ಬುಲೆಟ್ ಗಳು, ಅಶ್ರುವಾಯುಗಳನ್ನೂ ಸಿಡಿಸಿದರು. ಇದರ ಪರಿಣಾಮ ಹಲವರು ಗಾಯಗೊಂಡರು.

- Advertisement -


ಪ್ರತಿಭಟನೆ ಪರಿಣಾಮ ಪ್ರಮುಖ ನಗರಗಳಲ್ಲಿನ ಶಾಪಿಂಗ್ ಮಾಲ್ ಗಳು ಮತ್ತು ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು. ಢಾಕಾದಲ್ಲಿನ ಅಮೆರಿಕ ರಾಯಭಾರಿ ಕಚೇರಿ ಸೇರಿದಂತೆ ವಿವಿಧ ದೇಶಗಳ ರಾಯಭಾರಿ ಕಚೇರಿಗಳು ಮುಚ್ಚಿದ್ದವು.



Join Whatsapp