Home ಟಾಪ್ ಸುದ್ದಿಗಳು ಬಸ್ ಪಲ್ಟಿ: 40 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಬಸ್ ಪಲ್ಟಿ: 40 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಚಂಡೀಗಢ: ಹರಿಯಾಣದ ಪಂಚಕುಲದಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಸುಮಾರು 40ಕ್ಕೂ ಹೆಚ್ಚು ಶಾಲಾ ಮಕ್ಕಳು ಗಾಯಗೊಂಡಿದ್ದಾರೆ.


ಪಂಚಕುಲದ ಪಿಂಜೋರ್ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ಹರಿಯಾಣ ರೋಡ್ ವೇಸ್ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ 40ಕ್ಕೂ ಹೆಚ್ಚು ಶಾಲಾ ಮಕ್ಕಳು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಕೂಡಲೇ ಪಿಂಜೋರ್ ಆಸ್ಪತ್ರೆಗೆ ಮತ್ತು ಪಂಚಕುಲದ ಸೆಕ್ಟರ್ 6 ಸಿವಿಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.


ಸದ್ಯ ಅಪಘಾತಕ್ಕೆ ಬಸ್ ಚಾಲಕನ ಅತಿ ವೇಗವೇ ಕಾರಣ ಎನ್ನಲಾಗಿದೆ.

Join Whatsapp
Exit mobile version