Home ಟಾಪ್ ಸುದ್ದಿಗಳು ಪೆಗಾಸಸ್ ಬೇಹುಗಾರಿಕೆ ಪ್ರಕರಣ| ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆ ಕೋರಿ ಸಿಜೆಐಗೆ ಪತ್ರ ಬರೆದ 500ಕ್ಕೂ ಹೆಚ್ಚು...

ಪೆಗಾಸಸ್ ಬೇಹುಗಾರಿಕೆ ಪ್ರಕರಣ| ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆ ಕೋರಿ ಸಿಜೆಐಗೆ ಪತ್ರ ಬರೆದ 500ಕ್ಕೂ ಹೆಚ್ಚು ಜನರು!

ಹೊಸದಿಲ್ಲಿ: ಪೆಗಾಸಸ್ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣ ಸುಪ್ರೀಂ ಕೋರ್ಟ್‌ ಮಧ್ಯಸ್ಥಿಕೆ ವಹಿಸಬೇಕೆಂದು ಕೋರಿ 500ಕ್ಕೂ ಹೆಚ್ಚು ಜನರು ಸಿಜೆಐ ಎನ್‌ವಿ ರಮಣ ಅವರಿಗೆ ಪತ್ರ ಬರೆದಿದ್ದಾರೆ.

ಅಲ್ಲದೆ ಭಾರತದಲ್ಲಿ ಇಸ್ರೇಲಿ ಸಂಸ್ಥೆ NSOನ ಪೆಗಾಸಸ್ ಸ್ಪೈವೇರ್ ಮಾರಾಟ, ವರ್ಗಾವಣೆ ಮತ್ತು ಬಳಕೆಯನ್ನು ನಿಷೇಧಿಸುವಂತೆ ಕೋರಿದ್ದಾರೆ.

ಸ್ಪೈವೇರ್ ಅನ್ನು ಮಹಿಳಾ ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು, ಪತ್ರಕರ್ತರು, ಮಾನವ ಹಕ್ಕುಗಳ ಹೋರಾಟಗಾರರು, ವಕೀಲರು ಮತ್ತು ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ಕಣ್ಗಾವಲುಗಾಗಿ ಬಳಸಲಾಗಿದೆ ಎಂಬ ಮಾಧ್ಯಮ ವರದಿಗಳ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಅವರು ಲಿಂಗ-ತಟಸ್ಥ ಲೈಂಗಿಕ ಕಿರುಕುಳ, ದತ್ತಾಂಶ ಸಂರಕ್ಷಣೆ ಮತ್ತು ಗೌಪ್ಯತೆ ನೀತಿಯನ್ನು ಅಳವಡಿಸಿಕೊಳ್ಳಲು ನ್ಯಾಯಾಲಯವನ್ನು ಕೋರಿದ್ದಾರೆ. ಈ ಪತ್ರಕ್ಕೆ ಅರುಣಾ ರಾಯ್, ಅಂಜಲಿ ಭರದ್ವಾಜ್, ಹರ್ಷ್ ಮಂದರ್ ಸೇರಿದಂತೆ ವಿವಿಧ ಕಾರ್ಯಕರ್ತರು ಸಹಿ ಹಾಕಿದ್ದಾರೆ.

ಬೇಹುಗಾರಿಕೆಯಲ್ಲಿ 300ಕ್ಕೂ ಹೆಚ್ಚು ಭಾರತೀಯ ಮೊಬೈಲ್ ಫೋನ್ ಸಂಖ್ಯೆಗಳಿವೆ ಎಂದು ಅಂತಾರಾಷ್ಟ್ರೀಯ ಮಾಧ್ಯಮ ಒಕ್ಕೂಟ ವರದಿ ಮಾಡಿದೆ.

Join Whatsapp
Exit mobile version