ಬೆಂಗಳೂರು: ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ, ಸಿದ್ಧರಾಮಯ್ಯ ಸೇರಿದಂತೆ 61 ಕ್ಕೂ ಅಧಿಕ ಮಂದಿಗೆ ಜೀವ ಬೆದರಿಕೆ ಹಾಕಲಾಗಿದೆ.
ರಾಜ್ಯದೆಲ್ಲೆಡೆ ಮುಸ್ಲಿಮ್ ದ್ವೇಷ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದ ಸುಮಾರು 61 ಮಂದಿ ಚಿಂತಕರನ್ನು ಗುರಿಯಾಗಿಸಿ ಜೀವ ಬೆದರಿಕೆ ಹಾಕಿರುವುದು ವಿಶೇಷ.
ಈ ಕುರಿತು ಕುಂವೀ ಅವರು ಮಾಹಿತಿಯನ್ನು ಹಂಚಿಕೊಂಡಿದ್ದು, ನನಗೆ ಭದ್ರಾವತಿಯಿಂದ ಹೆಸರು, ವಿಳಾಸವಿಲ್ಲದ ಹೇಡಿ ಜೀವ ಬೆದರಿಕೆ ಪತ್ರವನ್ನು ಕಳುಹಿಸಿದ್ದಾನೆ. ಇದರಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ, ಸಿದ್ಧರಾಮಯ್ಯ ಅವರು ಹೆಸರು ಒಳಗೊಂಡಿದೆ ಎಂದು ತಿಳಿಸಿದ್ದಾರೆ.
ಹಿಜಾಬ್, ಭಗವದ್ಗೀತೆ ಸೇರಿದಂತೆ ಹಲವು ವಿಚಾರದಲ್ಲಿ ಮುಸ್ಲಿಮರ ಪರವಾಗಿ 61 ಸಾಹಿತಿಗಳು ಸರ್ಕಾರಕ್ಕೆ ಪತ್ರ ಬರೆದ ಕಾರಣ ಜೀವ ಬೆದರಿಕೆ ಹಾಕಲು ಪ್ರಮುಖ ಕಾರಣ ಎಂದು ಹೇಳಲಾಗಿದೆ.
ಈ ಮಧ್ಯೆ ಧರ್ಮ ಮತ್ತು ಮತಾಂಧತೆಯ ಅಮಲೇರಿಸಿಕೊಂಡು ಶಾಂತಿ ನೆಮ್ಮದಿಗೆ ಭಂಗ ತರುತ್ತಿರುವವರ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು. ಭಗವದ್ಗೀತೆಯನ್ನು ಪ್ರಸ್ತಾಪವನ್ನು ಕೈಬಿಡಬೇಕು. ಕನ್ನಡ ನೆಲದ ಸಾಮರಸ್ಯ ಪರಂಪರೆಗೆ ಯಾವುದೇ ಕುತ್ತು ಬಾರದಂತೆ ಸರಕಾರವು ಕ್ರಮ ತೆಗೆದುಕೊಳ್ಳಬೇಕು ಎಂದು ಸಾಹಿತಿಗಳು ಪತ್ರದ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದರು.