Home ಟಾಪ್ ಸುದ್ದಿಗಳು ಯಡಿಯೂರಪ್ಪ, ಬೊಮ್ಮಾಯಿ ಆಡಳಿತದಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ: ಡಿ.ಕೆ.ಶಿವಕುಮಾರ್

ಯಡಿಯೂರಪ್ಪ, ಬೊಮ್ಮಾಯಿ ಆಡಳಿತದಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ: ಡಿ.ಕೆ.ಶಿವಕುಮಾರ್

ಬೆಂಗಳೂರು: ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಅವರು ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು ₹ 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.


ವಿಧಾನಸೌಧದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು “ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ ₹87 ಕೋಟಿ. ಎಪಿಎಂಸಿಯ ₹47 ಕೋಟಿ, 2019 ರಲ್ಲಿ ಅಂಗವಿಕಲ ಕಲ್ಯಾಣ ಇಲಾಖೆಯ ₹22 ಕೋಟಿ, ಅಂಬೇಡ್ಕರ್ ನಿಗಮದ ಕೆನರಾ ಬ್ಯಾಂಕ್ ಅಲ್ಲಿನ ಹಣ ಜೂನ್ 2018 ರಲ್ಲಿ ₹5 ಕೋಟಿ, ದೇವರಾಜ್ ಅರಸು ನಿಗಮದ ₹47 ಕೋಟಿ, ಮಾಲಿನ್ಯ ನಿಯಂತ್ರಣ ಮಂಡಲಿಯ ₹10 ಕೋಟಿ ಹಾಗೂ ಕೆಐಡಿಬಿಯ ಹಣ ಸೇಲಂಗೆ ಅಕ್ರಮವಾಗಿ ವರ್ಗಾವಣೆಯಾಗಿದೆ” ಎಂದು ತಿಳಿಸಿದರು.


ಬಿಜೆಪಿಯ ಅಕ್ರಮಗಳನ್ನು ತನಿಖೆ ನಡೆಸುವಿರಾ ಎಂದು ಪ್ರಶ್ನಿಸಿದಾಗ “ಖಂಡಿತವಾಗಿಯೂ ತನಿಖೆ ನಡೆಸುತ್ತೇವೆ. ಆದರೆ ಎಲ್ಲವೂ ದಾಖಲೆಯಲ್ಲಿ ಇರಬೇಕು ಎನ್ನುವ ಕಾರಣಕ್ಕೆ ಸದನದಲ್ಲಿ ಎಲ್ಲಾ ದಾಖಲೆಗಳನ್ನು ಬಯಲು ಮಾಡುತ್ತೇವೆ. ಅಕ್ರಮಗಳ ಹಿಂದೆ ಇರುವ ಯಾವ ಮಂತ್ರಿ, ಅಧ್ಯಕ್ಷರು, ಮುಖ್ಯಮಂತ್ರಿಗಳು ಇದ್ದರು ಎಂದು ಜನರಿಗೆ ತಿಳಿಸುತ್ತೇವೆ” ಎಂದು ಹೇಳಿದರು.

Join Whatsapp
Exit mobile version