ಸುವರ್ಣ ಸೌಧದ ಮುಂಭಾಗ ಸಾರಿಗೆ ನೌಕರರಿಂದ ಅಹೋರಾತ್ರಿ ಪ್ರತಿಭಟನೆ: ಅಸ್ವಸ್ಥಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು

Prasthutha|

ಬೆಳಗಾವಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸುವರ್ಣ ಸೌಧದ ಬಸ್ತವಾಡ ಬಳಿ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ.

- Advertisement -

ಕಳೆದ ಎರಡು ದಿನಗಳಿಂದ ಉಪವಾಸ ಕೈಗೊಂಡಿದ್ದ ಹಿನ್ನೆಲೆ ಧರಣಿ ನಿರತ ಬೆಂಗಳೂರು ಸಾರಿಗೆ ಘಟಕ-20ರ ನಿರ್ವಾಹಕಿ ಜಯಶ್ರೀ ಎಂಬ ಮಹಿಳೆಯ ಆರೋಗ್ಯದಲ್ಲಿ ಏರು ಪೇರು ಕಂಡು ಬಂದಿದ್ದು, ತಡ ರಾತ್ರಿ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಾರಿಗೆ ನಿಗಮಗಳಲ್ಲಿ ಮಾಡುವ ಅವೈಜ್ಞಾನಿಕ ಚೌಕಾಸಿ ವೇತನ ಪರಿಷ್ಕರಣಾ ಪದ್ಧತಿಯನ್ನು ಕೈಬಿಟ್ಟು, ಸರಕಾರದ ಇಲಾಖೆ ಹಾಗೂ ನಿಗಮ ಮಂಡಳಿಗಳಲ್ಲಿ ಚಾಲ್ತಿಯಲ್ಲಿರುವ ವೇತನ ಆಯೋಗದ ಮಾದರಿಯನ್ನು ಅಳವಡಿಸಬೇಕು ಎಂದು ಒತ್ತಾಯಿಸಿ ಕಳೆದ ಎರಡು ದಿನಗಳಿಂದ ಸಾರಿಗೆ ಇಲಾಖೆ ನೌಕರರು ಬೆಳಗಾವಿ ನಗರದ ಸುವರ್ಣ ಸೌಧದ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾರೆ.

- Advertisement -

ಸಾರಿಗೆ ಸಚಿವ ಶ್ರೀರಾಮುಲು ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಅಹವಾಲು ಸ್ವೀಕರಿಸಿ, ಮಾತುಕತೆ ನಡೆಸಿದ್ದರು. ಆದರೆ ಸಚಿವರು ಮತ್ತು ಪ್ರತಿಭಟನಾಕಾರರ ನಡುವೆ ಸಂಧಾನ ವಿಫಲವಾದ ಹಿನ್ನೆಲೆ ಸಾರಿಗೆ ನೌಕರರು ಪ್ರತಿಭಟನೆ ಮುಂದುವರಿಸಿದ್ದಾರೆ.

ಈ ಮಧ್ಯೆ ಪ್ರತಿಭಟನಾ ಸ್ಥಳದಲ್ಲಿ ವಿದ್ಯುತ್ ಹಾಗೂ ನೀರಿನ ಸೌಲಭ್ಯವನ್ನು ಅಧಿಕಾರಿಗಳು ಕಟ್ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.



Join Whatsapp