Home ಟಾಪ್ ಸುದ್ದಿಗಳು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದ ಹಿಟ್ಟಿನ ಗಿರಣಿಯ ಮಾಲೀಕ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದ ಹಿಟ್ಟಿನ ಗಿರಣಿಯ ಮಾಲೀಕ

ಭೋಪಾಲ್: 12 ವರ್ಷದ ಬಾಲಕಿಯ ಮೇಲೆ ಹಿಟ್ಟಿನ ಗಿರಣಿಯ ಮಾಲೀಕನೋರ್ವ ಅತ್ಯಾಚಾರವೆಸಗಿದ್ದು, ಸಿಟ್ಟಿಗೆದ್ದ ಸಂಬಂಧಿಕರು ಆರೋಪಿಯ ಕಾರು, ಬೈಕ್ಗೆ ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ಬೆತುಲ್ ನ ಆಜಾದ್ ವಾರ್ಡ್ ಪ್ರದೇಶದಲ್ಲಿ ನಡೆದಿದೆ.
ಬಾಲಕಿ ಮನೆಯಲ್ಲಿ ಈ ಬಗ್ಗೆ ಹೇಳಿಕೊಂಡಿದ್ದರಿಂದ ಕೃತ್ಯ ಬೆಳಕಿಗೆ ಬಂದಿದ್ದು, ಸ್ಥಳೀಯ ಸಂಸ್ಥೆಯೊಂದರ ಸದಸ್ಯನಾಗಿರುವ 58 ವರ್ಷದ ಆರೋಪಿಯನ್ನು ಇನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಾಹನಗಳಿಗೆ ಬೆಂಕಿ ಹಚ್ಚಿದ್ದ ಜಾಗಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿರುವ ಪೊಲೀಸರು ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 376 ಹಾಗೂ ಪೊಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಕರಣದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಧ್ಯಪ್ರದೇಶ ಗೃಹ ಮಂತ್ರಿ ನರೋತ್ತಮ ಮಿಶ್ರಾ, ಸದ್ಯ ಭೋಪಾಲ್ ಪರಿಸ್ಥಿತಿ ಹತೋಟಿಯಲ್ಲಿದ್ದು, ಆರೋಪಿಗಳನ್ನು ಬಂಧಿಸಲಾಗುವುದು. ಜೊತೆಗೆ ಹಿಂಸಾಚಾರದಲ್ಲಿ ತೊಡಗಿದ್ದವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

Join Whatsapp
Exit mobile version