ಇಂಗ್ಲೆಂಡ್: ಇಂಗ್ಲೆಂಡಿನ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಾಲಿವುಡ್ ವಿವಾದಿತ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಯ ಭಾಷಣವನ್ನು ಕೊನೆ ಕ್ಷಣದಲ್ಲಿ ರದ್ದುಗೊಳಿಸಿದ ಘಟನೆ ನಡೆದಿದೆ. ನನ್ನನ್ನು ವಿಶ್ವವಿದ್ಯಾಲಯವು ಭಾಷಣಕ್ಕಾಗಿ ಆಹ್ವಾನಿಸಿತ್ತು. ಆದರೆ ಕೊನೆ ಕ್ಷಣದಲ್ಲಿ ಭಾಷಣವನ್ನು ರದ್ದುಗೊಳಿಸಿ ಅವಮಾನ ಮಾಡಿದ್ದಾರೆ ಎಂದು ಅಗ್ನಿಹೋತ್ರಿ ದೂರಿದ್ದಾರೆ.
ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಹಿಂದೂ ಧ್ವನಿಯನ್ನು ಅಡಗಿಸುವ ಪ್ರಯತ್ನ ನಡೆಸಲಾಗಿದೆ. ವಿವಿಯು ಕೊನೆಯ ಕ್ಷಣದಲ್ಲಿ ನನ್ನ ಕಾರ್ಯಕ್ರಮವನ್ನು ರದ್ದುಗೊಳಿಸಿದೆ. ಈ ಮೂಲಕ ವಿಶ್ವವಿದ್ಯಾಲಯವು ಅಲ್ಪಸಂಖ್ಯಾತರಾಗಿರುವ ಹಿಂದೂ ಜನಾಂಗೀಯ ಹತ್ಯೆ ಮತ್ತು ಹಿಂದೂ ವಿದ್ಯಾರ್ಥಿಗಳ ಹಕ್ಕುಗಳನ್ನು ಮೊಟಕುಗೊಳಿಸಿದ್ದಾರೆ ಎಂದು ಹೇಳಿ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವಿವೇಕ್ ಹಂಚಿಕೊಂಡಿದ್ದಾರೆ.
ಪಾಕಿಸ್ಥಾನಿ ಮೂಲದವರು ಅಲ್ಲಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿರುವ ಹಿನ್ನೆಲೆಯಲ್ಲಿ ನನ್ನ ಭಾಷಣ ರದ್ದುಗೊಂಡಿದೆ. ನನ್ನ ಕಷ್ಟದ ಹೋರಾಟದಲ್ಲಿ ನೀವು ನನ್ನನ್ನು ಬೆಂಬಲಿಸಿ ಎಂದು ವಿವೇಕ್ ಮನವಿ ಮಾಡಿದ್ದಾರೆ. ಈ ಬಗ್ಗೆ ವಿಶ್ವ ವಿದ್ಯಾಲಯದ ವಿರುದ್ಧ ಕಾನೂನು ಮೊಕದ್ದಮೆ ಹೂಡವುದಾಗಿಯೂ ತಿಳಿಸಿದ್ದಾರೆ.