ನಾಸಿಕ್‌ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆ | 22 ಮಂದಿ ಸಾವು

Prasthutha: April 21, 2021

ನಾಸಿಕ್:‌ ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ಡಾ. ಜಾಕಿರ್ ಹುಸೇನ್ ಎನ್ಎಂಸಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಿಂದ 22 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಆಸ್ಪತ್ರೆಯಲ್ಲಿದ್ದ ಒಟ್ಟು 150 ರೋಗಿಗಳ ಪೈಕಿ 127 ಮಂದಿಗೆ ಆಕ್ಸಿಜನ್‌ ನೀಡಲಾಗುತ್ತಿತ್ತು. ಉಳಿದ ರೋಗಿಗಳು ವೆಂಟಿಲೇಟರ್‌ ಸಹಾಯದಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.

“ನಮಗೆ ಮುಂಜಾನೆ 12.30ಕ್ಕೆ ಟ್ಯಾಂಕ್‌ʼನಿಂದ ಆಮ್ಲಜನಕ ಸೋರಿಕೆಯಾಗುತ್ತಿರುವ ಬಗ್ಗೆ ಕರೆ ಬಂತು. ತಕ್ಷಣ ನಾವು ಸ್ಥಳಕ್ಕೆ ಆಗಮಿಸಿ ತೆರೆದಿದ್ದ ಕವಾಟವನ್ನು ಮುಚ್ಚಿದ್ದೇವೆ. ಸಾಕಷ್ಟು ಆಮ್ಲಜನಕ ಸೋರಿಕೆಯಾಗಿದೆ” ಎಂದು ಘಟನೆ ಕುರಿತು ಅಗ್ನಿಶಾಮಕ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಈ ಘಟನೆ ಕುರಿತು ಪ್ರತಿಕ್ರಿಯಿಸಿದ ಸಚಿವ ಡಾ. ರಾಜೇಂದ್ರ ಶಿಂಘನೆ, ‘ಇದೊಂದು ದುರದೃಷ್ಟಕರ ಘಟನೆ. ಸಂಪೂರ್ಣ ವರದಿಯನ್ನು ಪಡೆಯಲು ಪ್ರಯತ್ನಿಸುತ್ತಿದ್ದು, ವಿಚಾರಣೆಗೆ ಆದೇಶ ನೀಡಿದ್ದೇವೆ. ಘಟನೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಜರುಗಿಸುತ್ತೇವೆ’ ಎಂದಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!