Home ಟಾಪ್ ಸುದ್ದಿಗಳು ಮುರುಘಾ ಶ್ರೀ ಮಠದ ಬಸವಶ್ರೀ ಪ್ರಶಸ್ತಿ ಹಿಂದಿರುಗಿಸಿದ ಪಿ ಸಾಯಿನಾಥ್

ಮುರುಘಾ ಶ್ರೀ ಮಠದ ಬಸವಶ್ರೀ ಪ್ರಶಸ್ತಿ ಹಿಂದಿರುಗಿಸಿದ ಪಿ ಸಾಯಿನಾಥ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಸ್ವಾಮೀಜಿಯವರ ಬಂಧನವಾಗಿರುವುದರಿಂದ ಮುರುಘಾ ಮಠದಿಂದ ನೀಡಲ್ಪಟ್ಟ ಬಸವಶ್ರೀ ಪ್ರಶಸ್ತಿಯನ್ನು ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಅವರು ಹಿಂದಿರುಗಿಸಿದ್ದಾರೆ.

ಚಿತ್ರದುರ್ಗದ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಅವರ ಕುರಿತು ಮಾಧ್ಯಮಗಳಲ್ಲಿ ಕೇಳಿಬಂದ ವರದಿ ನೋಡಿ ತುಂಬಾ ಬೇಸರವಾಗಿದೆ. ಅವರು ಈಗ ಪೋಕ್ಸೊ ಮತ್ತು ಎಸ್ಸಿ / ಎಸ್ಟಿ ಕಾಯ್ದೆಯಡಿ ಮಕ್ಕಳ ಮೇಲೆ, ವಿಶೇಷವಾಗಿ ಪ್ರೌಢಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ ಮತ್ತು ಆರೋಪಗಳನ್ನು ಎದುರಿಸುತ್ತಿದ್ದಾರೆ.  ಸಂತ್ರಸ್ತರಿಗೆ ನೈತಿಕ ಬೆಂಬಲ ನೀಡುವ ಉದ್ದೇಶದಲ್ಲಿ 2017 ರಲ್ಲಿ ಮಠವು ನನಗೆ ನೀಡಿದ ಬಸವಶ್ರೀ ಪ್ರಶಸ್ತಿಯನ್ನು (ಮತ್ತು ಅದರೊಂದಿಗೆ ಬಂದ 5 ಲಕ್ಷ ರೂ.ಗಳ ಬಹುಮಾನದ ಹಣವನ್ನು ಚೆಕ್ ಮೂಲಕ) ಈ ಮೂಲಕ ಹಿಂದಿರುಗಿಸುತ್ತೇನೆ ಎಂದು ಪಿ,ಸಾಯಿನಾಥ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.   

Join Whatsapp
Exit mobile version