ಪೇಸಿಎಂ ಪ್ರಕರಣ: ಕಾಂಗ್ರೆಸ್ ನಾಯಕರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ವಜಾ

Prasthutha|

ಬೆಂಗಳೂರು: ದೇಶಾದ್ಯಂತ ವ್ಯಾಪಕ ಸುದ್ದಿಯಾಗಿದ್ದ ಕಾಂಗ್ರೆಸ್ ಪಕ್ಷದ ಪೇಸಿಎಂ ಅಭಿಯಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಇಬ್ಬರು ನಾಯಕ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದು, ತನಿಖಾ ಪ್ರಕ್ರಿಯೆಗೂ ತಡೆ ನೀಡಿದೆ.

- Advertisement -

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಈ ಆದೇಶ ನೀಡಿದೆ.

ಬಿಜೆಪಿ ಸರ್ಕಾರ ಕಮಿಷನ್ ಹರಣದಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಪೇಸಿಎಂ ಅಭಿಯಾನ ಆರಂಭಿಸಿದ್ದರು. ಈ ಪೋಸ್ಟರ್ ಗಳು ರಾಜ್ಯ ಮಾತ್ರವಲ್ಲದೇ ರಾಷ್ಟ್ರವ್ಯಾಪಿ ಭಾರಿ ಸದ್ದು ಮಾಡಿತ್ತು. ಅಲ್ಲದೆ ಉಭಯ ಪಕ್ಷಗಳ ನಾಯಕರ ನಡುವೆ ತೀವ್ರ ವಾಕ್ಸಮರ ಮತ್ತು ಕಾನೂನು ಸಮರಕ್ಕೂ ಕಾರಣವಾಗಿದೆ. ಈ ಸಂಬಂಧ ಬೆಂಗಳೂರಿನ ನೆಲಮಂಗಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಮುಖಂಡರು ಹಾಗೂ ವಕೀಲರಿಬ್ಬರ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.

Join Whatsapp
Exit mobile version