ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಅವರನ್ನು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಆಯ್ಕೆ ಮಾಡಿದೆ.
ಕಳೆದ ಒಂದು ವರ್ಷದಲ್ಲಿ ಜಿಲ್ಲೆಯ ರಾಜಕಾರಣದಲ್ಲಿ ಸಕ್ರೀಯರಾಗಿರುವ ಪದ್ಮರಾಜ್, ಪಕ್ಷ ಸಂಘಟನೆಯ ಜೊತೆಗೆ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಜೊತೆ ಕೆಲಸ ಮಾಡುತ್ತಾ ಬಹುಸಂಖ್ಯಾತ ಬಿಲ್ಲದ ಸಮುದಾಯದ ಮತಗಳನ್ನು ಕ್ರೋಢಿಕರಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಬಹುಸಂಖ್ಯಾತ ಬಿಲ್ಲವರು ಮತ್ತು ಆರ್ಥಿಕವಾಗಿ ಹಿಂದುಳಿದವರ ಮತಗಳನ್ನು ಸೆಳೆಯುವ ಶಕ್ತಿ ಪದ್ಮರಾಜ್ ಅವರಲ್ಲಿದೆ ಎಂಬ ಕಾರಣಕ್ಕೆ ಅವರಿಗೆ ಅವಕಾಶ ಒದಗಿ ಬಂದಿದೆ ಎನ್ನಲಾಗುತ್ತಿದೆ. 2024ರ ಲೋಕಸಭಾ ಚುನಾವಣೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ವರ್ಷದ ಹಿಂದೆ ಪದ್ಮರಾಜ್ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು.