ಯುವತಿ ಮೇಲೆ ಆ್ಯಸಿಡ್ ದಾಳಿ: ಪಾಗಲ್ ಪ್ರೇಮಿ ಪರಾರಿ

Prasthutha|

ಬೆಂಗಳೂರು: ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಪಾಗಲ್ ಪ್ರೇಮಿ ಆ್ಯಸಿಡ್  ದಾಳಿ ನಡೆಸಿರುವ ಘಟನೆ ಬೆಂಗಳೂರಿನ ಸುಂಕದಕಟ್ಟೆ ಮುತ್ತೂಟ್ ಫಿನ್ ಕಾರ್ಪ್ ಬಳಿ ಸಂಭವಿಸಿದೆ.

- Advertisement -

ಪಾಗಲ್ ಪ್ರೇಮಿ ನಾಗೇಶ್ ಎಂಬಾತ ಆ್ಯಸಿಡ್ ಹಾಕಿ ವಿಕೃತಿ ಮೆರೆದಿದ್ದಾನೆ.

ನಾಗೇಶ್ ಪ್ರೀತಿಸುವಂತೆ ಯುವತಿಯ ಹಿಂದೆ  ಬಿದ್ದಿದ್ದ. ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದಾನೆ. ಗಾಯಾಳು ಯುವತಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

 ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ನಾಗೇಶ್ ಗಾಗಿ  ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Join Whatsapp