ಪಹಲ್ಗಾಮ್ ದಾಳಿ: ಭದ್ರತಾ ಸಂಸ್ಥೆಗಳಿಂದ ಮೂವರು ಶಂಕಿತರ ರೇಖಾಚಿತ್ರ ಬಿಡುಗಡೆ

- Advertisement -

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್​ ನಾಗ್​ ಜಿಲ್ಲೆಯ ಪಹಲ್ಗಾಮ್​ ನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಶಂಕಿತ ಉಗ್ರರ ರೇಖಾಚಿತ್ರವನ್ನು ಭದ್ರತಾ ಸಂಸ್ಥೆಗಳು ಬುಧವಾರ ಬಿಡುಗಡೆ ಮಾಡಿವೆ.

- Advertisement -

ಪೈಶಾಚಿಕ ದಾಳಿಯಿಂದ ಬದುಕುಳಿದಿರುವವರ ಸಹಾಯದಿಂದ ರೇಖಾಚಿತ್ರಗಳನ್ನು ಸಿದ್ಧಪಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರು.

ಪ್ರಾಥಮಿಕ ವಿಧಿವಿಜ್ಞಾನ ವಿಶ್ಲೇಷಣೆ ಮತ್ತು ಬದುಕುಳಿದವರ ಸಾಕ್ಷ್ಯಗಳ ಪ್ರಕಾರ, ಭಯೋತ್ಪಾದಕರು ಮಿಲಿಟರಿ ದರ್ಜೆಯ ಶಸ್ತ್ರಾಸ್ತ್ರಗಳು ಮತ್ತು ಸುಧಾರಿತ ಸಂವಹನ ಸಾಧನಗಳನ್ನು ಬಳಸಿದ್ದಾರೆ. ಕೊಲ್ಲಲ್ಪಟ್ಟವರಲ್ಲಿ ಇಬ್ಬರು ವಿದೇಶಿಯರು (ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ನೇಪಾಳದವರು) ಮತ್ತು ಇಬ್ಬರು ಸ್ಥಳೀಯ ನಿವಾಸಿಗಳು ಸೇರಿದ್ದಾರೆ. 26 ಜನರಲ್ಲಿ 22 ಜನರನ್ನು ಗುರುತಿಸಲಾಗಿದ್ದು, ಉಳಿದವರನ್ನು ಗುರುತಿಸಲಾಗುತ್ತಿದೆ.

- Advertisement -


Must Read

Related Articles