Home ಟಾಪ್ ಸುದ್ದಿಗಳು ಪಾಕಿಸ್ತಾನ್ ಪರ ಘೋಷಣೆ ಆರೋಪ: ಮೂವರ ಬಂಧನ

ಪಾಕಿಸ್ತಾನ್ ಪರ ಘೋಷಣೆ ಆರೋಪ: ಮೂವರ ಬಂಧನ

ಬೆಂಗಳೂರು: ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಬಗ್ಗೆ ಸ್ವಯಂ ಪ್ರೇರಿತವಾಗಿ ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದ ವಿಧಾನಸೌಧ ಪೊಲೀಸರು, ಈಗ ದೆಹಲಿ ಮೂಲದ ಇಲ್ತಾಜ್, ಆರ್‌.ಟಿ. ನಗರ ಮೂಲದ ಮುನಾವರ್ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಅವರನ್ನು ಬಂಧಿಸಿದ್ದಾರೆ.

ರಾಜ್ಯಸಭಾ ಸಂಸದ ಸೈಯದ್ ನಾಸೀರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ರಾಜ್ಯ ಸರಕಾರ ಘಟನೆ ನಡೆದ ದೃಶ್ಯಗಳನ್ನು ಎಫ್‌ಎಸ್‌ಎಲ್‌ಗೆ ರವಾನಿಸಿತ್ತು. ಎಫ್‌ಎಸ್‌ಎಲ್ ವರದಿ ದೃಢವಾದ ಹಿನ್ನೆಲೆ ಮೂವರ ಬಂಧನವಾಗಿದೆ ಎನ್ನಲಾಗಿದೆ.

ಸದ್ಯ ಈ ಮೂವರನ್ನು ವಿಚಾರಣೆಗೆ ಒಳಪಡಿಸಿ ಬಳಿಕ ನ್ಯಾಯಾಲಕ್ಕೆ ಹಾಜರುಪಡಿಸಲಿದ್ದಾರೆ.

Join Whatsapp
Exit mobile version