8 ಉಗ್ರರ ಹತ್ಯೆ ಮಾಡಿದ ಪಾಕಿಸ್ತಾನ ಸೇನೆ

Prasthutha|

ಪೇಶಾವರ: ಪಾಕಿಸ್ತಾನದಲ್ಲಿ ಭಯೋತ್ಪಾದಕರ ವಿರುದ್ಧ ಸಮರ ಸಾರಲಾಗಿದ್ದು, ಖೈಬರ್ ಪಖ್ತುಂಖ್ವಾದ ದಕ್ಷಿಣ ವಜೀರಿಸ್ತಾನ್ ಜಿಲ್ಲೆಯಲ್ಲಿ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಪಾಕ್ ಸೇನೆ 8 ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಇದನ್ನು ಪಾಕ್ ಮಿಲಿಟರಿಯ ಮಾಧ್ಯಮ ವಿಭಾಗ ದೃಢಪಡಿಸಿದೆ.

- Advertisement -

ದಕ್ಷಿಣ ವಜೀರಿಸ್ತಾನ್ ಜಿಲ್ಲೆಯ ಸರೋಘ ಪ್ರದೇಶದಲ್ಲಿ ಗುಪ್ತಚರ ಮಾಹಿತಿಯನ್ನು ಆಧರಿಸಿ ಸೇನೆ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆ ವೇಳೆ ಸೈನಿಕರು ಮತ್ತು ಉಗ್ರರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ. ಕೊನೆಗೆ ಪಾಕ್ ಸೇನೆ 8 ಉಗ್ರರನ್ನು ಹೊಡೆದುರುಳಿಸಿ ಅವರಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.

Join Whatsapp