ಪಾಕಿಸ್ತಾನದ ಬಸ್ ನಲ್ಲಿ ಪ್ರಬಲ ಬಾಂಬ್ ಸ್ಫೋಟ : 13 ಮಂದಿ ಸಾವು

Prasthutha: July 14, 2021

ಲಾಹೋರ್ : ಪಾಕಿಸ್ತಾನದ ದಾಸು ಅಣೆಕಟ್ಟಿನಲ್ಲಿ ಕೆಲಸ ಮಾಡುತ್ತಿರುವ ಚೀನಾ ಎಂಜಿನಿಯರ್ ಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಸ್ ನಲ್ಲಿ ಭೀಕರ ಸ್ಫೋಟ ಸಂಭವಿಸಿದ ಪರಿಣಾಮ 13 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಬಸ್ಸ್ ನಲ್ಲಿ ಚೀನಾದ ಎಂಜಿನಿಯರ್ ಗಳು ಮತ್ತು ಪಾಕಿಸ್ತಾನಿ ಸೈನಿಕರು ಸೇರಿ ಒಟ್ಟು 30 ಮಂದಿ ಇದ್ದರು, ಹಲವು ಮಂದಿ ಗಾಯಗೊಂಡಿದ್ದು ಇನ್ನು ಕೆಲವರ ಸ್ಥಿತಿ ಗಂಭೀರವಾಗಿದೆ. ಮೃತಪಟ್ಟವರಲ್ಲಿ ನಾಲ್ವರು ಇಂಜಿನಿಯರ್ ಗಳು ಮತ್ತು 9 ಮಂದಿ ಕಾರ್ಮಿಕರಾಗಿದ್ದಾರೆ ಎಂದು ತಿಳಿದುಬಂದಿದೆ.

‘ಸ್ಫೋಟದ ನಂತರ ಬಸ್ ಆಳವಾದ ಕಂದಕಕ್ಕೆ ಬಿದ್ದಿದೆ. ಬಸ್ಸ್ ನಲ್ಲಿದ್ದ ಒಬ್ಬ ಚೀನಾದ ಎಂಜಿನಿಯರ್ ಮತ್ತು ಓರ್ವ ಸೈನಿಕ ನಾಪತ್ತೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಮತ್ತು ಗಾಯಗೊಂಡವರನ್ನು ಏರ್ ಆಂಬುಲೆನ್ಸ್ ಮೂಲಕ ರಕ್ಷಿಸಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಫೋಟಕವನ್ನು ಬಸ್ ನೊಳಗೆ ಇಡಲಾಗಿತ್ತೋ ಅಥವಾ ರಸ್ತೆ ಬದಿ ಇಡಲಾಗಿತ್ತೋ ಎಂಬುದು ಇನ್ನೂ ಸ್ಪಷ್ಟಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ