ಇಸ್ಲಾಮಾಬಾದ್: ಭ್ರಷ್ಟಾಚಾರ ಆರೋಪಗಳಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿರುವ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಿಟಿಐ ಪಕ್ಷವನ್ನು ನಿಷೇಧಿಸಲು ಮುಂದಾಗಿರುವುದಾಗಿ ಸಚಿವ ಅಟ್ಟಾ ಟರಾರ್ ಇಂದು ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟರಾರ್, ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಪಿಟಿಐ ಪಕ್ಷವನ್ನು ನಿಷೇಧಿಸಲು ಪಾಕ್ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ಇಮ್ರಾನ್ ಖಾನ್ ನೇತೃತ್ವದ ಪಿಟಿಐ ಪಕ್ಷವನ್ನು ನಿಷೇಧಿಸುವ ಹಕ್ಕು ಪಾಕ್ ಸರ್ಕಾರಕ್ಕೆ ಇಲ್ಲ ಎಂದು ಇಮ್ರಾನ್ ಖಾನ್ ಕಾನೂನು ಸಲಹೆಗಾರ ನಯೀಮ್ ಹೈದರ್ ಪ್ರತಿಕ್ರಿಯೆ ನೀಡಿದ್ದಾರೆ. ಯಾರು ಪಿಟಿಐ ನಿಷೇಧದ ಬಗ್ಗೆ ಮಾತನಾಡುತ್ತಿದ್ದಾರೆಯೋ, ಅವರೆಲ್ಲಾ ತಮ್ಮ ಗೋರಿಯನ್ನು ತಾವೇ ತೋಡಿಕೊಳ್ಳುತ್ತಿದ್ದಾರೆ ಎಂದು ಹೈದರ್ ಹೇಳಿದ್ದಾರೆ.