ಪಾಕಿಸ್ತಾನ: ಇಮ್ರಾನ್ ಖಾನ್ ನಾಮಪತ್ರ ತಿರಸ್ಕೃತ

Prasthutha|

ಕರಾಚಿ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗವು ತಿರಸ್ಕರಿಸಿದೆ. ಜೈಲಿನಲ್ಲಿರುವ ಇಮ್ರಾನ್ ಖಾನ್ ಅವರ ಧ್ವನಿಯನ್ನು ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಲ್ಲಿ ಬಳಸಿ ಹಲವೆಡೆ ಪ್ರಚಾರ ಕಾರ್ಯಗಳೂ ನಡೆದಿವೆ. ಇದರ ನಡುವೆ ಇಮ್ರಾನ್ ಅವರ ನಾಮಪತ್ರವನ್ನು ತಿರಸ್ಕರಿಸಿರುವುದಾಗಿ ಅಲ್ಲಿನ ಚುನಾವಣಾ ಆಯೋಗ ಹೇಳಿದೆ.

- Advertisement -

ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಇಮ್ರಾನ್‌ ಖಾನ್‌ ಅವರನ್ನು ಐದು ವರ್ಷಗಳವರೆಗೆ ಚುನಾವಣೆಗಳಲ್ಲಿ ಸ್ಪರ್ಧಿಸದಂತೆ ಪಾಕಿಸ್ತಾನ ಚುನಾವಣಾ ಆಯೋಗವು ಕಳೆದ ಆಗಸ್ಟ್‌ನಲ್ಲಿ ನಿರ್ಬಂಧ ವಿಧಿಸಿತ್ತು. ಇದರ ಹೊರತಾಗಿಯೂ ಅವರು ನಾಮಪತ್ರ ಸಲ್ಲಿಸಿದ್ದರು.

ಪ್ರಧಾನಿಯಾಗಿದ್ದಾಗ ವಿದೇಶಿ ಗಣ್ಯರಿಂದ ಉಡುಗೊರೆಯಾಗಿ ಪಡೆದಿದ್ದ ದುಬಾರಿ ವಸ್ತುಗಳನ್ನು ಸರ್ಕಾರಿ ಅಧಿಕಾರಿಗಳಿಗೆ ಮಾರಾಟ ಮಾಡಿದ್ದ ಆರೋಪ ಇಮ್ರಾಖ್‌ ಖಾನ್‌ ವಿರುದ್ಧ ಇದ್ದು, ಪ್ರಕರಣದ ವಿಚಾರಣೆ ನಡೆಸಿದ್ದ ಇಸ್ಲಾಮಾಬಾದ್‌ನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಅವರಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ.

- Advertisement -

ಕೋರ್ಟ್ ಆದೇಶವನ್ನು ಪರಿಗಣಿಸಿ ಸಂವಿಧಾನದ 63 (1)(ಎಚ್‌) ವಿಧಿ ಹಾಗೂ 2017ರ ಚುನಾವಣಾ ಕಾಯ್ದೆಯ 232ನೇ ಸೆಕ್ಷನ್‌ ಅನ್ವಯ ಇಮ್ರಾನ್‌ ಖಾನ್‌ ಅವರನ್ನು ಐದು ವರ್ಷಗಳವರೆಗೆ ಚುನಾವಣೆಗಳಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿಕೆ ಬಿಡುಗಡೆ ಮಾಡಿತ್ತು.

Join Whatsapp