ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಅಕ್ಟೋಬರ್ನಲ್ಲಿ ಎಸ್ಸಿಒ ಶೃಂಗಸಭೆ ನಡೆಯಲಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿಯನ್ನು ಆಹ್ವಾನಿಸಲಾಗಿದೆ.
ಅಕ್ಟೋಬರ್ 15-16 ರಂದು ಯುರೇಷಿಯನ್ ಗುಂಪಿನ ರಾಷ್ಟ್ರಗಳ ಮುಖ್ಯಸ್ಥರ ಮಂಡಳಿಯ ನಂತರ ಎರಡನೇ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ SCO ಶೃಂಗಸಭೆಯನ್ನು ಪಾಕಿಸ್ತಾನ ಆಯೋಜಿಸುತ್ತದೆ.
ಈ ವರ್ಷ ಖಝಾಕಿಸ್ತಾನದಲ್ಲಿ ನಡೆದ ದೇಶಗಳ ಮುಖ್ಯಸ್ಥರ ಶೃಂಗಸಭೆಗೆ ಗೈರಾಗಿದ್ದನ್ನು ಹೊರತುಪಡಿಸಿದರೆ ಮೋದಿ ಎಲ್ಲಾ ಸಭೆಯಲ್ಲೂ ಪಾಲ್ಗೊಂಡಿದ್ದಾರೆ.ಜುಲೈನಲ್ಲಿ ಸಂಸತ್ ಅಧಿವೇಶನ ನಡೆಯುವ ಸಂದರ್ಭದಲ್ಲಿ ಇದು ಆಯೋಜನಯಾಗಿದ್ದರಿಂದ ಮೋದಿ ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ.
ಪಾಕಿಸ್ತಾನದೊಂದಿಗಿನ ಸಂಬಂಧವನ್ನು ಹದಗೆಡಿಸಿದಂತೆ ಭಾರತವನ್ನು ಪ್ರತಿನಿಧಿಸಲು ಸಚಿವರನ್ನು ನೇಮಿಸುತ್ತಾರೆಯೇ ಎಂಬುದು ಕುತೂಹಲಕಾರಿ ಸಂಗತಿಯಾಗಿದೆ.