ಒಗ್ಗಟ್ಟಿಲ್ಲದೆ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಪಾಕಿಸ್ತಾನವು ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರಗಳಲ್ಲಿ ಒಂದು: ಅಧ್ಯಕ್ಷ ಜೋ ಬೈಡನ್

Prasthutha|

ವಾಷಿಂಗ್ಟನ್: ಒಗ್ಗಟ್ಟಿಲ್ಲದೆ ಅಣ್ವಸ್ತ್ರಗಳನ್ನು ಹೊಂದಿರುವ ಪಾಕಿಸ್ತಾನವು ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರಗಳಲ್ಲಿ ಒಂದಾಗಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.

- Advertisement -

ಜಾಗತಿಕವಾಗಿ ಬದಲಾಗುತ್ತಿರುವ ಭೌಗೋಳಿಕ ರಾಜಕೀಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಡೆಮಾಕ್ರಟಿಕ್ ಪಕ್ಷದ ಕಾಂಗ್ರೆಸ್ ಪ್ರಚಾರ ಸಮಿತಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಬೈಡನ್, ನನ್ನ ಪ್ರಕಾರ, ಯಾವುದೇ ಒಗ್ಗಟ್ಟು ಇಲ್ಲದೆ ಅಣ್ವಸ್ತ್ರಗಳನ್ನು ಹೊಂದಿರುವ  ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರಗಳಲ್ಲಿ ಒಂದು ಪಾಕಿಸ್ತಾನ ಎಂದರು.

- Advertisement -

ಪಾಕಿಸ್ತಾನದ ಅಣ್ವಸ್ತ್ರಗಳ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಪಾಶ್ಚಿಮಾತ್ಯ ದೇಶಗಳು ಕಳವಳ ವ್ಯಕ್ತಪಡಿಸಿದ್ದು, ಪಾಕಿಸ್ತಾನದ ಅಣ್ವಸ್ತ್ರಗಳು ಭಯೋತ್ಪಾದಕರು ಅಥವಾ ಜಿಹಾದಿ ಶಕ್ತಿಗಳ ಕೈಗೆ ಸೇರಬಹುದು ಎಂದು ಪಶ್ಚಿಮದ ಅನೇಕರು ಚಿಂತಿತರಾಗಿದ್ದಾರೆ ಎಂದು ಅವರು ಹೇಳೀದರು.



Join Whatsapp