ವಾಷಿಂಗ್ಟನ್: ಒಗ್ಗಟ್ಟಿಲ್ಲದೆ ಅಣ್ವಸ್ತ್ರಗಳನ್ನು ಹೊಂದಿರುವ ಪಾಕಿಸ್ತಾನವು ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರಗಳಲ್ಲಿ ಒಂದಾಗಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.
ಜಾಗತಿಕವಾಗಿ ಬದಲಾಗುತ್ತಿರುವ ಭೌಗೋಳಿಕ ರಾಜಕೀಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ಡೆಮಾಕ್ರಟಿಕ್ ಪಕ್ಷದ ಕಾಂಗ್ರೆಸ್ ಪ್ರಚಾರ ಸಮಿತಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಬೈಡನ್, ನನ್ನ ಪ್ರಕಾರ, ಯಾವುದೇ ಒಗ್ಗಟ್ಟು ಇಲ್ಲದೆ ಅಣ್ವಸ್ತ್ರಗಳನ್ನು ಹೊಂದಿರುವ ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರಗಳಲ್ಲಿ ಒಂದು ಪಾಕಿಸ್ತಾನ ಎಂದರು.
ಪಾಕಿಸ್ತಾನದ ಅಣ್ವಸ್ತ್ರಗಳ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಪಾಶ್ಚಿಮಾತ್ಯ ದೇಶಗಳು ಕಳವಳ ವ್ಯಕ್ತಪಡಿಸಿದ್ದು, ಪಾಕಿಸ್ತಾನದ ಅಣ್ವಸ್ತ್ರಗಳು ಭಯೋತ್ಪಾದಕರು ಅಥವಾ ಜಿಹಾದಿ ಶಕ್ತಿಗಳ ಕೈಗೆ ಸೇರಬಹುದು ಎಂದು ಪಶ್ಚಿಮದ ಅನೇಕರು ಚಿಂತಿತರಾಗಿದ್ದಾರೆ ಎಂದು ಅವರು ಹೇಳೀದರು.