ಪಾಕಿಸ್ತಾನ: ನ್ಯುಮೋನಿಯಾದಿಂದ 200ಕ್ಕೂ ಹೆಚ್ಚು ಮಕ್ಕಳು ಮೃತ್ಯು

Prasthutha|

ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನ್ಯುಮೋನಿಯಾದಿಂದ 200ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿವೆ. ತೀವ್ರ ಚಳಿಯ ವಾತಾವರಣದಿಂದಾಗಿ ಈ ಸಾವು ಸಂಭವಿಸಿವೆ ಎಂದು ಸರ್ಕಾರ ಶುಕ್ರವಾರ ದೃಢಪಡಿಸಿದೆ.

- Advertisement -

ಮೃತಪಟ್ಟ ಹೆಚ್ಚಿನ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದರು ಹಾಗೂ ನ್ಯುಮೋನಿಯಾ ಲಸಿಕೆ ಪಡೆದಿರಲಿಲ್ಲ ಎಂದು ಅಲ್ಲಿನ ಸ್ಥಳಿಯ ಸರ್ಕಾರ ಮಾಹಿತಿ ನೀಡಿದೆ.


ಜನವರಿ 1ರಿಂದ ಪಂಜಾಬ್ ಪ್ರಾಂತ್ಯದಲ್ಲಿ ಒಟ್ಟು 10,520 ನ್ಯುಮೋನಿಯಾ ಪ್ರಕರಣಗಳು ವರದಿಯಾಗಿವೆ. 220 ಮಕ್ಕಳು ಮೃತಪಟ್ಟಿದ್ದು, ಅವರೆಲ್ಲರೂ 5 ವರ್ಷದೊಳಗಿನವರು ಎಂದು ಸರ್ಕಾರ ದೃಢಪಟಿಸಿದೆ.



Join Whatsapp