‘ಕೋವಿಡ್ ವಿರುದ್ಧ ಒಗ್ಗಟ್ಟಾಗಿ ಹೋರಾಡೋಣ’ : ಭಾರತಕ್ಕೆ ಪಾಕ್ ಪ್ರಧಾನಿ ಕರೆ
Prasthutha: April 24, 2021

ಇಸ್ಲಾಮಾಬಾದ್: ಕೊರೋನಾ ಸೋಂಕಿನ ವಿರುದ್ಧ ಒಗ್ಗಟ್ಟಾಗಿ ಹೋರಾಡೋಣ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಾರತಕ್ಕೆ ಕರೆ ನೀಡಿದ್ದಾರೆ.
ಭಾರತದಲ್ಲಿ ತಾಂಡವವಾಡುತ್ತಿರುವ ಕೊರೋನಾ ಸೋಂಕಿನ ಬಗ್ಗೆ ಕಳವಳ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಅವರು, “ಅಪಾಯಕಾರಿ ಕೊರೋನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ನಾನು ಭಾರತದೊಂದಿಗೆ ಇದ್ದೇನೆ. ಈ ಸಂದರ್ಭದಲ್ಲಿ ಎಲ್ಲರೂ ಒಗ್ಗಟ್ಟು ಪ್ರದರ್ಶಿಸುವ ಅಗತ್ಯವಿದೆ. ಕೊರೋನಾ ಸೋಂಕಿನಿಂದ ಬಳಲಿತ್ತಿರುವವರು ಬೇಗನೆ ಚೇತರಿಸಿಕೊಳ್ಳಲಿ. ಮಹಾಮಾರಿ ಕೊರೋನಾ ಮಾನವೀಯತೆಗೆ ಸವಾಲೊಡ್ಡಿದೆ. ಇದನ್ನು ಎಲ್ಲರೂ ಒಗ್ಗಟ್ಟಾಗಿ ಎದುರಿಸೋಣ. ನಾವು ಭಾರತದೊಂದಿಗೆ ಇದ್ದೇವೆ” ಎಂದು ಹೇಳಿದ್ದಾರೆ.
ಪಾಕಿಸ್ತಾನ ವಿದೇಶಾಂಗ ಸಚಿವ ಷಾ ಮಹಮ್ಮದ್ ಖುರೇಶಿ ಕೂಡ ಟ್ವೀಟ್ ಮಾಡಿದ್ದು, ಕೊರೋನಾ ಸೋಂಕಿಗೆ ತುತ್ತಾಗಿರುವ ಭಾರತದ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದಾರೆ. ಕೋವಿಡ್ ನಿಂದ ಪ್ರಾಣ ಕಳೆದುಕೊಂಡ ಭಾರತೀಯರ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಕರೊನಾ ವಿರುದ್ಧದ ಹೋರಾಟದಲ್ಲಿ ನಾವು ನಿಮ್ಮೊಂದಿಗಿದ್ದೇವೆ ಎಂದು ಅವರು ಹೇಳಿದ್ದಾರೆ.
