Home ಟಾಪ್ ಸುದ್ದಿಗಳು ಪಾಕಿಸ್ತಾನ: ಮರು ಚುನಾವಣೆ ಬೇಡ ಎಂದ ಸುಪ್ರೀಂ ಕೋರ್ಟ್

ಪಾಕಿಸ್ತಾನ: ಮರು ಚುನಾವಣೆ ಬೇಡ ಎಂದ ಸುಪ್ರೀಂ ಕೋರ್ಟ್

ಇಸ್ಲಾಮಾಬಾದ್‌: ಫೆಬ್ರುವರಿ 8ರ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಮರು ಚುನಾವಣೆ ನಡೆಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪಾಕಿಸ್ತಾನದ ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಈ ಮೂಲಕ ಮೈತ್ರಿ ಸರ್ಕಾರ ರಚನೆಯ ಹಾದಿಯನ್ನು ಕೋರ್ಟ್ ಸುಗಮಗೊಳಿಸಿದೆ.

ನ್ಯಾಯಾಂಗದ ಮೇಲ್ವಿಚಾರಣೆಯಲ್ಲಿ 30 ದಿವಸಗಳೊಳಗೆ ಮರು ಚುನಾವಣೆ ನಡೆಸಬೇಕು ಎಂದು ನಿವೃತ್ತ ಬ್ರಿಗೇಡಿಯರ್‌ ಅಲಿ ಖಾನ್‌‌ ಅರ್ಜಿಯಲ್ಲಿ ಕೋರಿದ್ದರು. ಪ್ರಚಾರಕ್ಕಾಗಿ ಈ ಅರ್ಜಿ ಸಲ್ಲಿಸಲಾಗಿದೆ ಎಂದಿರುವ ಮುಖ್ಯ ನ್ಯಾಯಮೂರ್ತಿ ಖಾಜಿ ಫಯಾಜ್‌ ಇಸಾ ಅವರನ್ನೊಳಗೊಂಡ ನ್ಯಾಯಪೀಠ, ಅರ್ಜಿದಾರರಾದ ನಿವೃತ್ತ ಬ್ರಿಗೇಡಿಯರ್‌ ಅಲಿ ಖಾನ್‌‌ಗೆ 5 ಲಕ್ಷ ಪಾಕಿಸ್ತಾನ ರೂಪಾಯಿ ದಂಡ ವಿಧಿಸಿದೆ.

ಪಾಕಿಸ್ತಾನದಲ್ಲಿ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಝ್ ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ನಡುವಣ ಮಾತುಕತೆ ಫಲಪ್ರದವಾಗಿದ್ದು, ಉಭಯ ಪಕ್ಷಗಳು ಸಮ್ಮಿಶ್ರ ಸರ್ಕಾರ ರಚನೆಯ ಅಧಿಕಾರ ಹಂಚಿಕೆಯ ಒಪ್ಪಂದಕ್ಕೆ ಸಮ್ಮತಿಸಿವೆ. ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಧ್ಯಕ್ಷ ಬಿಲಾವಲ್ ಭುಟ್ಟೊ-ಜರ್ದಾರಿ, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಝ್ ಅಧ್ಯಕ್ಷ ಶೆಹಬಾಝ್ ಶರೀಫ್ (72) ಅವರು ಪ್ರಧಾನಿಯಾಗಿ ಅಧಿಕಾರ ನಡೆಸಲಿದ್ದಾರೆ ಎಂದು ಘೋಷಿಸಿದ್ದಾರೆ.

Join Whatsapp
Exit mobile version