ಪೇಶಾವರ: ಹೊಸದಾಗಿ ನಿರ್ಮಾಣವಾಗುತ್ತಿದ್ದ ಪೊಲೀಸ್ ಠಾಣೆಯ ಕಾಮಗಾರಿಯಲ್ಲಿ ತೊಡಗಿದ್ದ ಆರು ಮಂದಿ ಕಾರ್ಮಿಕರನ್ನು ಅಪರಿಚಿತ ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ. ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ. ಜಿಲ್ಲಾ ಪೊಲೀಸ್ ಅಧಿಕಾರಿ ಘಟನೆಯನ್ನು ದೃಢಪಡಿಸಿದ್ದಾರೆ.
ದಕ್ಷಿಣ ವಜಿರಿಸ್ತಾನದ ಬುಡಕಟ್ಟು ಜಿಲ್ಲೆಯ ವಾನಾದಲ್ಲಿ ಕಾರ್ಮಿಕರು ತಮ್ಮ ಟೆಂಟ್ಗಳಲ್ಲಿ ವಿಶ್ರಾಂತಿಯಲ್ಲಿದ್ದಾಗ ಅಪರಿಚಿತ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ಬಗ್ಗೆ ಎಲ್ಲಾ ಆಯಾಮಗಳಿಂದ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.
ಯಾವುದೇ ಸಂಘಟನೆ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ. ಕಾರ್ಮಿಕರ ಹತ್ಯೆಯನ್ನು ನಿವೃತ್ತ ನ್ಯಾಯಮೂರ್ತಿ ಅರ್ಷದ್ ಹುಸೇನ್ ತೀವ್ರವಾಗಿ ಖಂಡಿಸಿದ್ದಾರೆ.
ಕಳೆದ ಆಗಸ್ಟ್ನಲ್ಲಿ ಇದೇ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಕನಿಷ್ಠ 11 ಕಾರ್ಮಿಕರು ಮೃತಪಟ್ಟು, ಇಬ್ಬರು ಗಾಯಗೊಂಡಿದ್ದರು.