ಹೊಸದಿಲ್ಲಿ: ಪೂರ್ವ ದೆಹಲಿಯ ಲಕ್ಷ್ಮಿ ನಗರದಲ್ಲಿ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿರುವುದಾಗಿ ದೆಹಲಿ ಪೊಲೀಸ್ ವಿಶೇಷ ಘಟಕ ಹೇಳಿದೆ.
ಬಂಧಿತನನ್ನು ಪಾಕಿಸ್ತಾನದ ಪಂಜಾಬ್ ಮೂಲದ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಆತನಿಂದ ಎಕೆ -47 ರೈಫಲ್ ಮತ್ತು ಗ್ರೆನೇಡ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, ಸ್ಫೋಟಕ ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.