ಸ್ವದೇಶಕ್ಕೆ ಹೋಗಲು ಒಪ್ಪದೇ ಕಣ್ಣೀರಿಡುತ್ತಿರುವ ಪಾಕ್ ಮಹಿಳೆ

Prasthutha|

ಬೆಂಗಳೂರು: ನಾನು ಭಾರತದಲ್ಲಿಯೇ ಇರುವೆ ಪತಿ ಜೊತೆಯಲ್ಲಿಯೇ ಸಾಯುವೆ, ಅದಕ್ಕೆ ಅವಕಾಶ ಮಾಡಿಕೊಡುವಂತೆ ಬಂಧಿತ ಪಾಕಿಸ್ತಾನಿ ಮಹಿಳೆ ಪೊಲೀಸರ ಮುಂದೆ ಕಣ್ಣೀರು ಹಾಕಿದ್ದಾಳೆ.

- Advertisement -


ನಾನು ಪ್ರೀತಿಸುವ ಯುವಕನಿಗಾಗಿ ದೇಶ ಬಿಟ್ಟು ಬಂದಿದ್ದೇನೆ ಆತನನ್ನು ವಿವಾಹವಾಗಿದ್ದೇನೆ ಆತನನ್ನು ಬಿಟ್ಟು ಹೋಗಲ್ಲ ಎಂದು ಪಟ್ಟು ಹಿಡಿದಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರೀತಿಗಾಗಿ ದೇಶವನ್ನೇ ಬಿಟ್ಟು ಬಂದು ಭಾರತದ ಪ್ರಜೆಯನ್ನು ಮದುವೆಯಾಗಿರುವ ಪಾಕಿಸ್ತಾನಿ ಇಕ್ರಾ ಜಿವಾನಿ, ಇಲ್ಲಿಯೇ ಇರುತ್ತೇನೆ ನಾನು ಪಾಕಿಸ್ತಾನಕ್ಕೆ ಹೋಗಲ್ಲ, ನಾವಿಬ್ಬರು ಮದುವೆ ಯಾಗಿದ್ದೇವೆ ಪತಿ ಮುಲಾಯಂ ಸಿಂಗ್ ಯಾದವ್ ಬಿಟ್ಟು ಹೋಗಲ್ಲ ಎಂದು ಪಟ್ಟು ಹಿಡಿದಿರುವುದು ಪೊಲೀಸರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.


ಮಹಿಳೆಯು ಭಾರತ ಬಿಟ್ಟು ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದರೂ ಕಾನೂನಿನಲ್ಲಿ ಅವಕಾಶ ಇಲ್ಲ. ಏನೇ ಆದರೂ ಆಕೆಯನ್ನು ಡಿಪೋರ್ಟ್ ಮಾಡಲು ಬೇಕಾದ ಪ್ರಕ್ರಿಯೆ ನಡೆಸುತ್ತಿದ್ದಾರೆ. ಪೊಲೀಸರು ಮತ್ತು ಎಫ್ ಆರ್ ಆರ್ ಒ ಅಧಿಕಾರಿಗಳು ಮಹಿಳೆಯು ಭಾರತಕ್ಕೆ ಬಂದಿರುವುದು ಅಕ್ರಮವಾಗಿರುವುದರಿಂದ ಆಕೆಯನ್ನು ಪಾಕಿಸ್ತಾನಕ್ಕೆ ಕಳಿಸಲು ಮುಂದಾಗಿದ್ದಾರೆ.
ಕೇಂದ್ರ ಸರ್ಕಾರದ ಸಂಬಂಧಪಟ್ಟ ಏಜೆನ್ಸಿಗಳ ಜೊತೆ ಎಫ್ ಆರ್ ಆರ್ ಒ ಅಧಿಕಾರಿಗಳು ಸಂಪರ್ಕ ಮಾಡಿದ್ದಾರೆ. ಪಾಕ್ ಮಹಿಳೆ ವಾಪಸ್ ಕಳಿಸಲು ಕನಿಷ್ಠ ಎರಡು ತಿಂಗಳ ಸಮಯ ಬೇಕಾಗಲಿದೆ. ಹೀಗಾಗಿ ಎರಡು ದೇಶಗಳ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಯುವತಿಯನ್ನು ವಾಪಸ್ ಕಳಿಸಬೇಕು. ಸದ್ಯ ಯುವತಿಯನ್ನು ಡಿಪೋರ್ಟ್ ಮಾಡಲು ಬೇಕಾದ ಕಾನೂನು ಪ್ರಕ್ರಿಯೆ ಪರಿಶೀಲನೆಯನ್ನು ಎಫ್ ಆರ್ ಆರ್ ಓ ಮತ್ತು ಪೊಲೀಸರು ನಡೆಸಿದ್ದಾರೆ.

- Advertisement -


ಮದುವೆ ಅನುಮಾನ:
ಮಹಿಳೆ ಇಕ್ರಾ ಜಿವಾನಿ ಮತ್ತು ಮುಲಾಯಂ ಸಿಂಗ್ ಮದುವೆ ಬಗ್ಗೆಯೇ ಪೊಲೀಸರಿಗೆ ಅನುಮಾನ ವ್ಯಕ್ತವಾಗಿದ್ದು, ಪೊಲೀಸರ ವಿಚಾರಣೆ ವೇಳೆ ಇಬ್ಬರು ಮದುವೆಯಾಗಿದ್ದೇವೆ ಎಂದಿದ್ದಾರೆ.
ಆದರೆ ಮದುವೆಯಾದ ಬಗ್ಗೆ ಯಾವುದೇ ಅಧಿಕೃತ ದಾಖಲೆ, ಫೋಟೊಗಳಿಲ್ಲ. ಮದುವೆಯಾದ ಬಗ್ಗೆ ಮ್ಯಾರೇಜ್ ಸರ್ಟಿಫಿಕೆಟ್ ಕೂಡ ಇಲ್ಲ. ಬೇರೆ ದಾಖಲಾತಿಗಳು ಕೂಡ ಪತ್ತೆಯಿಲ್ಲ. ಈ ರೀತಿ ಮದುವೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ.
ವಿದೇಶಿ ಮಹಿಳೆಯನ್ನು ಮದುವೆಯಾದಾಗ ಕಾನೂನಾತ್ಮಕ ದಾಖಲೆ ಇರಬೇಕು ಅದ್ಯಾವುದು ಇಲ್ಲದ ಹಿನ್ನೆಲೆಯಲ್ಲಿ ಮುಲಾಯಂ ಸಿಂಗ್ ಯಾದವ್’ನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸತೊಡಗಿದ್ದಾರೆ

Join Whatsapp