ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

Prasthutha|

ದುಬೈ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಹಾಗೂ ಮಾಜಿ ಸೇನಾ ಮುಖ್ಯಸ್ಥ ಜನರಲ್ ಪರ್ವೇಜ್ ಮುಷರಫ್ (79) ಇಂದು ನಿಧನರಾಗಿದ್ದಾರೆ.

ದೀರ್ಘ ಕಾಲದ ಅನಾರೋಗ್ಯದಿಂದ ದುಬೈನ ಅಮೆರಿಕನ್‌ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ರವಿವಾರ (ಫೆ. 5 ರಂದು) ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

- Advertisement -

1999 ರಿಂದ 2008ರ ವರೆಗೆ ಪಾಕಿಸ್ತಾನದ ಅಧ್ಯಕ್ಷರಾಗಿದ್ದ ಮುಷರಫ್ 2016 ರಿಂದ ದುಬೈನಲ್ಲಿ ವಾಸಿಸುತ್ತಿದ್ದರು.

ಅವರು 1943ರ ಆಗಸ್ಟ್ 11 ರಂದು ದೆಹಲಿಯಲ್ಲಿ ಜನಿಸಿದರು. ಮುಷರಫ್ ಕರಾಚಿಯ ಸೇಂಟ್ ಪ್ಯಾಟ್ರಿಕ್ ಪ್ರೌಢಶಾಲೆಯಲ್ಲಿ ತಮ್ಮ ಆರಂಭಿಕ ಶಿಕ್ಷಣವನ್ನು ಪೂರ್ಣಗೊಳಿಸಿದರು. ಅವರು ಲಾಹೋರ್‌ನ ಫಾರ್ಮನ್ ಕ್ರಿಶ್ಚಿಯನ್ ಕಾಲೇಜಿನಲ್ಲಿ ಉನ್ನತ ಶಿಕ್ಷಣವನ್ನು ಪಡೆದಿದ್ದರು.

- Advertisement -