Home ಟಾಪ್ ಸುದ್ದಿಗಳು ಪಾಕಿಸ್ತಾನದ ಮಾಜಿ ಅಧ್ಯಕ್ಷ ಮಾಮ್ನೂನ್ ಹುಸೇನ್ ನಿಧನ

ಪಾಕಿಸ್ತಾನದ ಮಾಜಿ ಅಧ್ಯಕ್ಷ ಮಾಮ್ನೂನ್ ಹುಸೇನ್ ನಿಧನ

ಕರಾಚಿ, ಜುಲೈ 15: ಪಾಕಿಸ್ತಾನದ ಮಾಜಿ ಅಧ್ಯಕ್ಷ ಮಾಮ್ನೂನ್ ಹುಸೇನ್ ಅವರು ಕರಾಚಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅವರ ಸಾವಿನ ಸುದ್ದಿಯನ್ನು ಹುಸೇನ್ ರವರ ಪುತ್ರ ಅರ್ಸಲಾನ್ ಮಾಮ್ನೂನ್ ಖಚಿತಪಡಿಸಿರುವುದಾಗಿ ಜಿಯೋ ಟಿವಿ ವರದಿ ಮಾಡಿದೆ.
ಕ್ಯಾನ್ಸರ್ ನಿಂದ ಬಳಲುತಿದ್ದ ಹುಸೇನ್ ರವರು ಪಾಕಿಸ್ತಾನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು.


ದಿವಂಗತ ಮಾಮ್ನೂನ್ ಹುಸೇನ್ ರವರು 2013 ರಿಂದ 2018 ರ ವರೆಗೆ ಪಾಕಿಸ್ತಾನದ 12ನೇ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದರು.
ಹುಸೇನ್ ರವರ ಅಕಾಲಿಕ ನಿಧನಕ್ಕೆ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹ್ಮೂದ್ ಖುರೇಷಿ ಸೇರಿದಂತೆ ಹಲವಾರು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version