ಗಾಝಾ: ಫೆಲೆಸ್ತೀನ್ ಪ್ರಧಾನಿ ಮುಹಮ್ಮದ್ ಶ್ತಾಯಿಹ್ ಅವರು ಸೋಮವಾರ ರಾಜೀನಾಮೆ ನೀಡಿದ್ದಾರೆ.
ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನ ಆಕ್ರಮಣ ಹಾಗೂ ಪಶ್ಚಿಮ ದಂಡೆ ಮತ್ತು ಜೆರುಸಲೇಮ್ ನಲ್ಲಿ ಪರಿಸ್ಥಿತಿ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರಿಗೆ ಸರಕಾರದ ರಾಜೀನಾಮೆಯನ್ನು ಸಲ್ಲಿಸುವುದಾಗಿ ಮುಹಮ್ಮದ್ ಶ್ತಾಯಿಹ್ ತಿಳಿಸಿದರು.
‘ಇಸ್ರೇಲ್ ಆಕ್ರಮಣದಿಂದ ಗಾಜಾ ಪಟ್ಟಿಯಲ್ಲಿ ಪರಿಸ್ಥಿತಿ ಉಲ್ಬಣಿಸಿದೆ. ಯುದ್ಧ ಪೀಡಿತ ಪ್ರದೇಶದಲ್ಲಿ ರಾಜಕೀಯ ಒಮ್ಮತ ರೂಪಿಸಲು ಅನುವು ಮಾಡಿಕೊಡುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದು ‘ಪ್ಯಾಲೇಸ್ಟಿನಿಯನ್ ಪ್ರಾಧಿಕಾರ’ದ ಅಧ್ಯಕ್ಷ ಮೊಹಮ್ಮದ್ ಅಬ್ಬಾಸ್ ಅವರಿಗೆ ಸಲ್ಲಿಸಿದ ರಾಜೀನಾಮೆಯಲ್ಲಿ ತಿಳಿಸಿದ್ದಾರೆ.