Home ಕರಾವಳಿ ಅಕ್ರಮ ಮರಳು ಸಾಗಾಟ ವಿರುದ್ಧ ಪಣಂಬೂರು, ಕಂಕನಾಡಿ, ಉಳ್ಳಾಲ ಪೊಲೀಸರ ಕಾರ್ಯಾಚರಣೆ: 4 ಲಾರಿ, ಹಿಟಾಚಿ...

ಅಕ್ರಮ ಮರಳು ಸಾಗಾಟ ವಿರುದ್ಧ ಪಣಂಬೂರು, ಕಂಕನಾಡಿ, ಉಳ್ಳಾಲ ಪೊಲೀಸರ ಕಾರ್ಯಾಚರಣೆ: 4 ಲಾರಿ, ಹಿಟಾಚಿ ವಶ

ಮಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಕುಲದೀಪ್ ಕುಮಾರ್ ಜೈನ್, ಅಕ್ರಮ ಮರಳುಗಾರಿಕೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದ ಬೆನ್ನಲ್ಲೇ ಪಣಂಬೂರು, ಕಂಕನಾಡಿ, ಉಳ್ಳಾಲ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ 4 ಲಾರಿ, ಒಂದು ಹಿಟಾಚಿ ಹಾಗೂ ಮರಳನ್ನು ವಶಕ್ಕೆ ಪಡೆದಿದ್ದಾರೆ.


ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತಣ್ಣಿರುಬಾವಿ ರಸ್ತೆಯಲ್ಲಿ ಫೆ.26ರಂದು 12-15 ಟನ್ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ಪಣಂಬೂರು ಪೊಲೀಸರು ವಶಕ್ಕೆ ಪಡೆದು, ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿದ್ದಾರೆ.


ಫೆ.28ರಂದು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆಡಂ ಕುದ್ರು ಎಂಬಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ 2 ಟಿಪ್ಪರ್ ಲಾರಿ ಮತ್ತು ಸುಮಾರು 2 ಯೂನಿಟ್ ನಷ್ಟು ಮರಳನ್ನು ಕಂಕನಾಡಿ ಪೊಲೀಸರು ವಶಪಡಿಸಿಕೊಂಡಿದ್ದು, ಮುಂದಿನ ಕ್ರಮಕ್ಕೆ ಗಣಿ, ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿದ್ದಾರೆ.


ಮಾರ್ಚ್ 1ರಂದು ಬೆಳಗ್ಗೆ 7 ಗಂಟೆಗೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಸೋಮನಾಥ ಉಳಿಯ ದೇವಸ್ಥಾನದ ಬಳಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವ ಬಗ್ಗೆ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ದಾಳಿ ನಡೆಸಿ ಅಕ್ರಮ ದಾಸ್ತಾನು ಮಾಡಿರುವ 10 ಲೋಡ್ ಮರಳು, 1 ಹಿಟಾಚಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತರ ಕಚೇರಿಯ ಪ್ರಕಟಣೆ ತಿಳಿಸಿದೆ.

Join Whatsapp
Exit mobile version