26 ರಂದು ಪಂಚರತ್ನ ರಥಯಾತ್ರೆ ಸಮಾರೋಪ: ಹತ್ತು ಲಕ್ಷ ಜನರ ಭಾರೀ ಸಮಾವೇಶ; ಎಚ್ ಡಿ ಕುಮಾರಸ್ವಾಮಿ

Prasthutha|


ಬೆಂಗಳೂರು: ಈ ತಿಂಗಳ 26ರಂದು ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭ ಮೈಸೂರಿನಲ್ಲಿ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

- Advertisement -


ಪಕ್ಷದ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ಇದು ನನ್ನ ರಾಜಕೀಯ ಜೀವನದ ಇತಿಹಾಸದಲ್ಲಿಯೇ ಮಹೋನ್ನತ ಸಮಾವೇಶ ಆಗಲಿದೆ. ಈವರೆಗೂ ಯಾರೂ ಮಾಡಿರದಂಥ ಸಮಾವೇಶ ಅದಾಗಿರುತ್ತದೆ ಎಂದರು.


ಕುಂಬಳಗೋಡಿನಿಂದ ಪ್ರಾರಂಭವಾಗಿ ಮೈಸೂರಿನವರೆಗೆ ಸುಮಾರು 100 ಕೀ.ಮೀ ದೂರ ಬೃಹತ್ ರೋಡ್ ಶೋ ಮಾಡಲಾಗುವುದು. ಆ ರೋಡ್ ಶೋ ದಲ್ಲಿ ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರನ್ನು ತೆರೆದ ವಾಹನದಲ್ಲಿ ಕರೆದುಕೊಂಡು ಹೋಗಲಾಗುವುದು. ಈ ಸಮಾವೇಶದಲ್ಲಿ ಹತ್ತು ಲಕ್ಷ ಜನ ಸೇರಲಿದ್ದಾರೆ. ಇದೊಂದು ಐತಿಹಾಸಿಕ ಸಮಾವೇಶ ಆಗಲಿದೆ ಎಂದು ಕುಮಾರಸ್ವಾಮಿ ನುಡಿದರು.

Join Whatsapp