ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಒತ್ತಡ । ಬೆದರಿಕೆಗಳಿಗೆ ಬಗ್ಗದ ಅಭ್ಯರ್ಥಿಯ ಮಗಳ ಸಾಮೂಹಿಕ ಅತ್ಯಾಚಾರ !

Prasthutha: March 19, 2021

► ಸಚಿನ್ ವರ್ಮಾ, ಲಾಲ್ಜಿ ವರ್ಮಾ, ಆಕಾಶ್ ವರ್ಮಾ, ಶಿವಂ ವರ್ಮಾ ಆರೋಪಿಗಳು !
► ಉತ್ತರ ಪ್ರದೇಶದ ಭಯಾನಕತೆ !

ಬಿಜೆಪಿಯ ಆದಿತ್ಯನಾಥ್ ಸರಕಾರ ಅಸ್ತಿತ್ವದಲ್ಲಿರುವ ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ತೀರಾ ಹದೆಗೆಟ್ಟಿದೆ. ಉತ್ತರ ಪ್ರದೇಶವೆಂದರೆ ಅದು  ‘ರೇಪ್ ಕ್ಯಾಪಿಟಲ್’ ಎಂಬ ಮಾಧ್ಯಮಗಳ ಹೇಳಿಕೆಗಳಿಗೆ ಅನ್ವರ್ಥವಾಗಿ ಅಲ್ಲಿ ಅತ್ಯಾಚಾರಗಳು ಪ್ರತಿದಿನ ಹೆಚ್ಚುತ್ತಲೇ ಇದೆ. ಅದರ ಮುಂದುವರಿದ ಭಾಗವಾಗಿ ಲಕ್ನೋದಿಂದ ಕೇವಲ 40 ಕಿಲೋ ಮೀಟರ್ ದೂರದಲ್ಲಿರುವ ಬರಾಬಂಕಿ ಜಿಲ್ಲೆಯಲ್ಲಿನ ಜೈದ್ ಪುರ ಎನ್ನುವ ಪ್ರದೇಶದ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಯನ್ನು ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಒತ್ತಡ ಹೇರಲಾಗಿತ್ತು. ಮಾತ್ರವಲ್ಲ ಹಣದ ಆಮಿಷಗಳನ್ನೂ ಒಡ್ಡಲಾಗಿತ್ತು. ಆದರೆ ಯಾವುದಕ್ಕೂ ಬಗ್ಗದೇ ಇದ್ದ ಆತನ 16 ವರ್ಷದ ಮಗಳನ್ನು ವಿರೋಧಿ ಬಣದ ನಾಲ್ವರು ಯುವಕರು ಆಕೆ ಕಾಲೇಜಿನಿಂದ ಮನೆಗೆ ಬರುತ್ತಿದ್ದ ವೇಳೆ ಅಪಹರಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಹೇಯ ಘಟನೆ ನಡೆದಿದೆ.

ಸಾಮೂಹಿಕ ಅತ್ಯಾಚಾರದ ಬಳಿಕವೂ ನಿನ್ನ ತಂದೆ ಕಣದಿಂದ ಹಿಂದೆ ಸರಿಯದಿದ್ದರೆ ಅವರನ್ನು ಕೊಲೆ ನಡೆಸುವುದಾಗಿ ಅವರು ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದಾಳೆ. ಅತ್ಯಾಚಾರದ ಬಳಿಕ ಸಂತ್ರಸ್ತೆಯನ್ನು ಆರೋಪಿಗಳು ಆಕೆಯ ಮನೆಯ ಬಳಿ ಬಿಟ್ಟು ಹೋಗಿದ್ದಾರೆಂದು ಹೇಳಲಾಗಿದೆ. ಆ ಬಳಿಕ ಪೊಲೀಸ್ ಠಾಣೆಯಲ್ಲಿ ನಾಲ್ವರು ಯುವಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅತ್ಯಾಚಾರಿಗಳನ್ನು ಸಚಿನ್ ವರ್ಮಾ, ಲಾಲ್ಜಿ ವರ್ಮಾ, ಆಕಾಶ್ ವರ್ಮಾ, ಶಿವಂ ವರ್ಮಾ ಎಂದು ಗುರುತಿಸಲಾಗಿದೆ. ಇವರಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ಮನೋಜ್ ಪಾಂಡೆ ಹೇಳಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!