ನಾಳೆ ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ | ಮತದಾರನ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Prasthutha|

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಮೂಡುಬಿದಿರೆ ಮತ್ತು ಬಂಟ್ವಾಳ ತಾಲೂಕುಗಳಲ್ಲಿ ನಾಳೆ(22-12-2020 ಮಂಗಳವಾರ) ಮೊದಲ ಹಂತದ ಚುನಾವಣೆ ನಡೆಯಲಿದೆ. ಗ್ರಾಮ ಪಂಚಾಯತ್ ಚುನಾವಣೆ ಪಕ್ಷಾತೀತವಾದುದರಿಂದ, ಗ್ರಾಮಗಳನ್ನು ಸರ್ವಾಂಗೀಣ ಅಭಿವೃದ್ಧಿಯತ್ತ ಕೊಂಡೊಯ್ಯುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅವಕಾಶವಿರುವ ಈ ಚುನಾವಣೆಯಲ್ಲಿ, ಜನರು ಪಕ್ಷಬೇಧ ಮರೆತು ಪಕ್ಷಾತೀತ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ತಮ್ಮ ತಮ್ಮ ಗ್ರಾಮಕ್ಕೆ ಒಳಿತನ್ನುಂಟು ಮಾಡಲಿದೆ.

- Advertisement -

ಉಡುಪಿ ಜಿಲ್ಲೆಯ ಹೆಬ್ರಿ, ಬ್ರಹ್ಮಾವರ ಮತ್ತು ಬೈಂದೂರು ತಾಲೂಕುಗಳ ಗ್ರಾಮ ಪಂಚಾಯತ್ ಗಳಿಗೆ ನಾಳೆ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ.

ಅಭ್ಯರ್ಥಿಗಳು ಈಗಾಗಲೇ ಚುಣಾವಣಾ ಪ್ರಚಾರ ನಡೆಸಿ ನಾಳೆಯ ಫೈನಲ್ ಹೋರಾಟಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.

- Advertisement -

ರಾಜ್ಯದಲ್ಲಿ ಒಟ್ಟು 117 ತಾಲೂಕುಗಳ 3,019 ಗ್ರಾಮ ಪಂಚಾಯತಿಗಳ 48,048 ವಾರ್ಡ್ ಗಳಿಗೆ ನಾಳೆ ಮತದಾನ ನಡೆಯಲಿದೆ. ಈಗಾಗಲೇ 4,377 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ. 1,17,387 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಎರಡನೇ ಸುತ್ತಿನ ಮತದಾನ ಡಿ.27ರ ಭಾನುವಾರ ನಡೆಯಲಿದೆ. ಗ್ರಾಮಗಳು ಸಮಗ್ರ ಅಭಿವೃದ್ಧಿ ಹೊಂದಿದರೆ, ಇಡೀ ಸಮಾಜ ಅಭಿವೃದ್ಧಿ ಹೊಂದಿದಂತೆ. ಪ್ರತಿಯೊಬ್ಬರಿಗೂ ಸಂವಿಧಾನ ನೀಡಿರುವ ತಮ್ಮ ಹಕ್ಕನ್ನು ತಪ್ಪದೆ ಚಲಾಯಿಸುವುದು ದೇಶದ ಸಮಗ್ರ ಏಳಿಗೆಗೆ ನೀಡುವ ದೊಡ್ಡ ಕೊಡುಗೆಯಾಗಿದೆ.  

Join Whatsapp