Home Uncategorized ಪಂಚಮಸಾಲಿ: ಸುಮ್ಮನೆ ಲಾಠಿ ಚಾರ್ಜ್ ಮಾಡಿಲ್ಲ, ಪೊಲೀಸರ ಬಳಿ ಹಿಂಸಾಚಾರದ ವಿಡಿಯೋಗಳಿವೆ; ಪರಮೇಶ್ವರ್

ಪಂಚಮಸಾಲಿ: ಸುಮ್ಮನೆ ಲಾಠಿ ಚಾರ್ಜ್ ಮಾಡಿಲ್ಲ, ಪೊಲೀಸರ ಬಳಿ ಹಿಂಸಾಚಾರದ ವಿಡಿಯೋಗಳಿವೆ; ಪರಮೇಶ್ವರ್

0

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಅಡಿಯಲ್ಲಿ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯ ಸುವರ್ಣ ವಿಧಾನಸೌಧದ ಬಳಿ ಬಸವಜಯ ಮೃತ್ಯಂಜಯಸ್ವಾಮಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಸರ್ಕಾರ ಮತ್ತು ಪೊಲೀಸ್ ಇಲಾಖೆ ಜವಾಬ್ದಾರಿಯುತವಾಗಿ ನಡೆದುಕೊಂಡಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಪ್ರತಿಭಟನಾಕಾರರಿಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಎಲ್ಲಾ ರೀತಿಯ ಅವಕಾಶ ಕಲ್ಪಿಸಲಾಗಿತ್ತು. ಆದರೆ ಹೋರಾಟಗಾರರು ಕಾನೂನು ಮತ್ತು ಸುವ್ಯವಸ್ಥಗೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸಿದರು. ಆದೇಶಗಳನ್ನು ಉಲ್ಲಂಘಿಸಿ ಸುವರ್ಣ ವಿಧನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಕಾರಣ ಲಘು ಲಾಠಿ ಪ್ರಹಾರ ನಡೆಸಲಾಗಿದೆ. ಪ್ರತಿಭಟನಾಕಾರರನ್ನು ಮುಂಜಾಗ್ರತಾ ಬಂಧನ ಮಾತ್ರ ನಡೆಸಲಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತಿಭಟನೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಎಲ್ಲವೂ ಸ್ಪಷ್ಟವಾಗಿದೆ, ಸರ್ಕಾರವು ಘಟನೆಯ ಬಗ್ಗೆ ತನಿಖೆ ನಡೆಸುವುದಿಲ್ಲ ಅಥವಾ ಇದರಲ್ಲಿ ಹೇಳಿದ ಯಾವುದೇ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ ಎಂದರು. ಪೊಲೀಸ್ ಲಾಠಿಚಾರ್ಜ್ ಕುರಿತ ಚರ್ಚೆಗೆ ಪ್ರತಿಕ್ರಿಯಿಸಿದ ಪರಮೇಶ್ವರ ಅವರು, ಹಿಂಸಾಚಾರದ ವಿಡಿಯೋಗಳು ಮತ್ತು ಫೋಟೋಗಳು ಮತ್ತು ಹಿಂಸಾಚಾರದ ವೇಳೆ ಕಲ್ಲು ತೂರಾಟ ನಡೆಸಿದವರ ಗುರುತು ಪೊಲೀಸರ ಬಳಿ ಇರುವುದರಿಂದ ತನಿಖೆಯ ಅಗತ್ಯವಿಲ್ಲ ಎಂದು ಹೇಳಿದರು.

NO COMMENTS

LEAVE A REPLY

Please enter your comment!
Please enter your name here

Exit mobile version