ಕಾಸರಗೋಡು: ಉಪ ಜಿಲ್ಲಾ ವಿಜ್ಞಾನ ಮೇಳ ನಡೆಯುತ್ತಿದ್ದ ಸಂದರ್ಭದಲ್ಲಿ ಚಪ್ಪರ ಕುಸಿದು ಹಲವು ಮಂದಿ ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.
ಚಪ್ಪರದ ಗುತ್ತಿಗೆ ದಾರ ಗೋಕುಲ್ ದಾಸ್, ಅಹಮ್ಮದಾಲಿ ಎ. ಪಿ, ಅಬ್ದುಲ್ ಬಶೀರ್, ಅಬ್ದುಲ್ ಶಾಮಿಲ್, ಇಲ್ಯಾಸ್ ಮುಹಮ್ಮದ್ ಮತ್ತು ಅಶ್ರಫ್ ಬಂಧಿತರು.
ಶುಕ್ರವಾರ ಮಧ್ಯಾಹ್ನ ಬೇಕೂರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಘಟನೆ ನಡೆದಿತ್ತು. ಮಂಗಳೂರು ಹಾಗೂ ಕಾಸರಗೋಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ 15 ಮಂದಿ ಗಾಯಗೊಂಡವರು ಚೇತರಿಸಿಕೊಳ್ಳುತ್ತಿದ್ದಾರೆ.