Home ಟಾಪ್ ಸುದ್ದಿಗಳು ಉಪವಾಸ ಅಂತ್ಯ ಮಾಡಿ ಪಾನಿಪುರಿ ಸೇವಿಸಿದ್ದ 19 ಮಕ್ಕಳು ಅಸ್ವಸ್ಥ.!

ಉಪವಾಸ ಅಂತ್ಯ ಮಾಡಿ ಪಾನಿಪುರಿ ಸೇವಿಸಿದ್ದ 19 ಮಕ್ಕಳು ಅಸ್ವಸ್ಥ.!

ದಾವಣಗೆರೆ: ಪಾನಿಪುರಿ ಸೇವಿಸಿ 19 ಮಕ್ಕಳು ಅಸ್ವಸ್ಥಗೊಂಡಿರುವಂತಹ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರಿನಲ್ಲಿ ನಡೆದಿದೆ.

ರಂಜಾನ್ ಹಿನ್ನೆಲೆಯಲ್ಲಿ ಮಕ್ಕಳು ಉಪವಾಸ ಇದ್ದರು. ಉಪವಾಸ ಅಂತ್ಯ ಮಾಡಿದ ಬಳಿಕ ಪಾನಿಪುರಿ ಸೇವಿಸಿದ್ದಾರೆ. ಬಳಿಕ ವಾಂತಿ ಭೇದಿ, ಹೊಟ್ಟೆ ನೋವಿನಿಂದ 19 ಮಕ್ಕಳು ಬಳಲಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಆಸ್ಪತ್ರೆಗೆ ಭೇಟಿ ನೀಡಿರುವ ತಹಶೀಲ್ದಾರ್ ಗುರು ಬಸವರಾಜ್ ಮತ್ತು ಜಿಪಂ ಸಿಇಓ ಸುರೇಶ್ ಹಿಟ್ನಾಳ್​ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಘಟನೆ ಬಳಿಕ ಪಾನಿಪುರಿ ಅಂಗಡಿ‌ ಮಾಲೀಕ ಪರಾರಿ ಆಗಿದ್ದಾನೆ. ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Join Whatsapp
Exit mobile version